New Delhi: ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ದೊರೆತಿದ್ದು, ಇದೀಗ ಇದನ್ನು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಇಂದು (ಸೆ.19) ರಂದು ಹೊಸ ಸಂಸತ್ತಿನಲ್ಲಿ ಮಹಿಳಾ ಮೀಸಲಾಯಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಸೆಪ್ಟಂಬರ್ (September) 17ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ಪಕ್ಷಗಳು ಮಹಿಳಾ ಮೀಸಲಾಯಿ ಮಸೂದೆಯನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ @AdhirRanjanChaudhary, “ಈ ಬಾರಿಯ ಸಂಸತ್ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ಹೇಳಿದ್ದಾರೆ.
ಇನ್ನು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಅನೇಕ ವರ್ಷಗಳೇ ಕಳೆದಿವೆ. ಾದರೆ ಉಭಯ ಸದನಗಳಲ್ಲಿ ಈ ಮಸೂದೆಗೆ ಒಪ್ಪಿಗೆ ಸಿಕ್ಕಿಲ್ಲ. 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು. ಆದರೆ ಸಾಕಷ್ಟು ಗೊಂದಲಗಳಿಂದಾಗಿ ಯಾವ ಸರ್ಕಾರವೂ ಈ ಮಸೂದೆಯನ್ನು ಮಂಡಿಸಲು ಹೆಚ್ಚಿನ ಆಸಕ್ತಿ ತೋರಲಿಲ್ಲ.

ಸದ್ಯ ಲೋಕಸಭೆಯಲ್ಲಿ #LokSabha ಕೇವಲ ಶೇಕಡಾ 15ರಷ್ಟು ಮಹಿಳಾ ಸಂಸದರಿದ್ದರೆ, ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ ಶೇಕಡಾ 10% ಗಿಂತ ಕಡಿಮೆಯಾಗಿದೆ. ಹೀಗಾಗಿ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಅಗತ್ಯ ಮೀಸಲಾಯಿ ನೀಡಬೇಕೆಂಬ ಕೂಗು ಅನೇಕ ದಿನಗಳಿಂದ ಕೇಳಿ ಬರುತ್ತಿದೆ.
ಇನ್ನು ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghavaal) ಮಂಡಿಸಲಿದ್ದು, ಸೆಪ್ಟೆಂಬರ್ 21 ರಂದು ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುವುದು. ನಂತರ ಸೆಪ್ಟೆಂಬರ್ 21 ರಂದು ರಾಜ್ಯಸಭೆಯಲ್ಲಿ ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.