72ನೇ ಗಣರಾಜ್ಯೋತ್ಸವ – ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ, ಜ. 27: ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ 72ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಸಿಡಿಎಸ್ ರಾವತ್ ಸೇರಿದಂತೆ ರಕ್ಷಣಾ ಪಡೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ.

ಧ್ವಜಾರೋಹಣ ನೆರವೇರಿದ ನಂತರ ರಾಜ್​ಪಥ್‌ನಲ್ಲಿ ಪರೇಡ್ ಆರಂಭವಾಗಿದ್ದು, ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯುತ್ತಿದೆ ಎನ್ನಲಾಗಿದೆ.

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದೇಶಿ ಅತಿಥಿ ಭಾಗಿಯಾಗುತ್ತಿಲ್ಲ, ಜೊತೆಗೆ ಬಾಂಗ್ಲಾದೇಶ ವಿಮೋಚನೆಯ 50ನೇ ವರ್ಷದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ನಲ್ಲಿ ಬಾಂಗ್ಲಾದೇಶದ ಸೇನಾ ತುಕಡಿ ಭಾಗಿಯಾಗಿರುವು ವಿಶೇಷವಾಗಿದೆ.

Exit mobile version