ನವದೆಹಲಿ, ಏ. 12: ದೆಹಲಿಯ ಏಮ್ಸ್ ನಲ್ಲಿ ಇತ್ತೀಚೆಗಷ್ಟೇ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಅಗಿದ್ದಾರೆ.
ಈ ಬಗ್ಗೆ ರಾಷ್ಟ್ರಪತಿಯವರ ಅಧಿಕೃತ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದ್ದು, ”ನನ್ನ ಶಸ್ತ್ರಚಿಕಿತ್ಸೆಯ ನಂತರ ನಾನು ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನನ್ನ ತ್ವರಿತ ಚೇತರಿಕೆಗಾಗಿ ಹಾರೈಸಿದ ಹಾಗೂ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಹಾಗೆಯೇ ನನ್ನ ಆರೈಕೆ ಮಾಡಿದ ಏಮ್ಸ್ ಮತ್ತು ಸೈನ್ಯದ ಆರ್‌ಆರ್ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳಿಗೂ ಧನ್ಯವಾದಗಳು. ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಮರಳಿ ರಾಷ್ಟ್ರಪತಿ ಭವನಕ್ಕೆ ಬಂದಿರುವುದು ನನಗೆ ಸಂತೋಷ ಮೂಡಿಸಿದೆ ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಹೇಳಿದ್ದಾರೆ.
ಎದೆನೋವು ಕಾಣಿಸಿಕೊಂಡ ಪರಿಣಾಮ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾ.26ರಂದು ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಬಳಿಕ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.