ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ

ಹೊಸದಿಲ್ಲಿ, ಅ. 02: ಪ್ರಧಾನಿ ನರೇಂದ್ರ ಮೋದಿ ಅವರು ಆ.9ರಂದು ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆವಹಿಸುವ ಗೌರವ ಭಾರತದ ಪ್ರಧಾನಿಗೆ ಪ್ರಾಪ್ತವಾಗಿದೆ.

ಕಳೆದ 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ನಾಯಕರೊಬ್ಬರು ವಿಶ್ವಸಂಸ್ಥೆಯ ಅಂಗ ಸಂಸ್ಥೆಯೊಂದರ ಅಧ್ಯಕ್ಷತೆ ವಹಿಸಿಕೊಳ್ಳುತ್ತಿದ್ದಾರೆ. ಈ ಕುರಿತು ವಿಶ್ವಸಂಸ್ಥೆಯ ಮಾಜಿ ರಾಯಭಾರಿ ಸಯ್ಯದ್ ಅಕ್ಬರುದ್ದೀನ್‌ ಹೇಳಿದ್ದಾರೆ.

ಇದು ವರ್ಚುವಲ್‌ ಸಭೆಯಾಗಿದ್ದು, ಆನ್‌ಲೈನ್‌ ಮೂಲಕ ಭಾಗಯಾಗಲಿದ್ದಾರೆ. ಭಾರತಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಈ ಹಿಂದೆ 1992ರಲ್ಲಿ ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್‌ ಕೂಡ ಭದ್ರತಾ ಮಂಡಳಿಯ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಅಧ್ಯಕ್ಷತೆವಹಿಸಿರಲಿಲ್ಲ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಲು ಒಪ್ಪಿದ್ದಾರೆ.

ವಿಶ್ವಸಂಸ್ಥೆಯಲ್ಲಿ ದೀರ್ಘಕಾಲದಿಂದಲೂ ಭಾರತವು ಭದ್ರತಾ ಮಂಡಳಿಯ ಸುಧಾರಣೆ ಹಾಗೂ ಭಾರತಕ್ಕೆ ಖಾಯಂ ಸದಸ್ಯತ್ವದ ಬೇಡಿಕೆಯಿಡುತ್ತಾ ಬಂದಿದ್ದು ಈ ನಿಟ್ಟಿನಲ್ಲಿ ಆ.9ರ ಸಭೆ ಮಹತ್ವ ಪಡೆದಿದೆ. ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷನಾಗುವ ಅವಕಾಶ ಇದುವರೆಗೆ 10 ಬಾರಿ ಸಿಕ್ಕಿದೆ.

Exit mobile version