Davanagere: ಲೋಕಸಭಾ ಚುನಾವಣೆಯ ಹಿನ್ನೆಲೆ ದಾವಣಗೆರೆಯಲ್ಲಿ ಚುನಾವಣಾ (Priyanaka Gandhi Slammed Modi) ಪ್ರಚಾರದ ಸಮಯದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕೋವಿಶೀಲ್ಡ್

ಲಸಿಕೆ (Covishield Vaccine) ವಿಚಾರ ಸಂಬಂಧ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.52 ಕೋಟಿ ದೇಣಿಗೆ ಪಡೆದುಕೊಂಡಿದೆ. ಈ ಕಂಪನಿಯು
ತಯಾರಿಸಿರುವ ಲಸಿಕೆ ಹಾಕಿಸಿಕೊಂಡು ದೇಶದ ಸಾವಿರಾರು ಜನ, ಅದರಲ್ಲೂ ವಿಶೇಷವಾಗಿ ಗಟ್ಟಿಮುಟ್ಟಾದ ಯುವಕರು ತೀವ್ರ ಹೃದಯಾಘಾತಕ್ಕೆ (Heart Attach) ಒಳಗಾಗಿ ಸಾವಿಗೀಡಾಗುತ್ತಿದ್ದಾರೆ.
ಇದಕ್ಕೆಲ್ಲ ಯಾರು ಹೊಣೆ ಎಂದು ಆರೋಪಿಸಿದ್ದಾರೆ. ಅಷ್ಟಕ್ಕೂ ಕೆಲ ತಿಂಗಳ ಹಿಂದೆ ಗುಜರಾತ್ನಲ್ಲಿ ತೂಗು ಸೇತುವೆಯೊಂದು ಕುಸಿದು ಅನೇಕರು ಪ್ರಾಣ ಕಳೆದುಕೊಂಡರು. ಆ ಸೇತುವೆ ನಿರ್ಮಿಸಿದ್ದ ಗುತ್ತಿಗೆದಾರನೂ
ಬಿಜೆಪಿಗೆ (BJP) ದೇಣಿಗೆ ನೀಡಿದ್ದ. ಹಾಗಾಗಿ ಆ ಪ್ರಕರಣ ಹಳ್ಳಹಿಡಿದು ಹೋಯಿತು.ಅಲ್ಲಿ ಕೈ ಕಾಲು ಕಳೆದುಕೊಂಡವರ ಬದುಕು ನಾಶವಾಗಿ ಹೋಯಿತು.ಅದೇ ರೀತಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು
ಶ್ರೀಮಂತ ಉದ್ಯಮಿಗಳಿಂದ ರೂ.7,000 ಕೋಟಿ ಮೊತ್ತವನ್ನು ದೇಣಿಗೆ ರೂಪದಲ್ಲಿ ಪಡೆದು ಅತ್ಯಂತ ಶ್ರೀಮಂತ ಪಕ್ಷವೆಂದು ಹೆಸರಾಗಿದೆ. ವಿಪಕ್ಷಕ್ಕೆ ಸೇರಿರುವ ಅನೇಕ ರಾಜಕಾರಣಿಗಳ ಮನೆಗಳ ಮೇಲೆ ಆದಾಯ
ತೆರಿಗೆ, (Income Tax)ಇ.ಡಿ. ದಾಳಿ ನಡೆಸಿ, ಅವರನ್ನು ತನ್ನತ್ತ ಸೆಳೆಯುತ್ತಿರುವ ಬಿಜೆಪಿ ನಿಜಕ್ಕೂ ದೊಡ್ಡ ಭ್ರಷ್ಟಾಚಾರ ಮಾಡಿದೆ ಎಂದಿದ್ದಾರೆ.

ದೇಶದ ಅರ್ಥ ವ್ಯವಸ್ಥೆ ಹದಗೆಡಲಿದೆ ಎಂಬ ಸಬೂಬು ಹೇಳುತ್ತ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿರುವ ಪ್ರಧಾನಿ ಮೋದಿ (Prime Minister Modi) ತನ್ನ ಉದ್ಯಮಿ ಸ್ನೇಹಿತರ ರೂ. 16 ಲಕ್ಷ
ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಕೇವಲ ರೂ.10,000ದಷ್ಟು ಸಾಲ ಭರಿಸಲಾಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಅವರ ಸಾಲವನ್ನು ಮನ್ನಾ ಮಾಡದವರು ದೊಡ್ಡ ಉದ್ಯಮಿಗಳ ಸಾಲ ಮನ್ನಾ
ಮಾಡಿದರೆ ಅರ್ಥ ವ್ಯವಸ್ಥೆ (Priyanaka Gandhi Slammed Modi) ಹಾಳಾಗುವುದಿಲ್ಲವೇ?
ಖಾಸಗಿಯವರಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕ ವಲಯದ ಉದ್ಯಮಗಳನ್ನು ಬಂದ್ ಮಾಡಲಾಗಿದೆ. ಹೆದ್ದಾರಿ, ಬಂದರು, ಕಲ್ಲಿದ್ದಲು, ವಿದ್ಯುತ್, ವಿಮಾನ ನಿಲ್ದಾಣ (Highways, Ports, Coal,
Electricity, Airports) ಮತ್ತಿತರ ವಲಯದ ಉದ್ಯಮಗಳನ್ನು ಖಾಸಗಿಯವರಿಗೆ ವಹಿಸಿ ಅರ್ಥ ವ್ಯವಸ್ಥೆಯನ್ನೇ ಹಾಳು ಮಾಡಿದೆ ಎಂದು ಕಿಡಿ ಕಾರಿದ್ದಾರೆ.
ಇದನ್ನು ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ದೋಖಾ ಪ್ರಕರಣ: ರೇಪ್ ಆರೋಪ