“ಪಾಕಿಸ್ತಾನ ಜಿಂದಾಬಾದ್” ಘೋಷಣೆಯನ್ನ ಯಾರೂ ಕೂಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Bengaluru: “ಪಾಕಿಸ್ತಾನ ಜಿಂದಾಬಾದ್” (Priyank Kharge Clarity- Pakistan Zindabad) ಘೋಷಣೆಯನ್ನ ಯಾರೂ ಕೂಗಿಲ್ಲ. ಅದನ್ನು ತಪ್ಪಾಗಿ ಕೇಳಿಸಿಕೊಳ್ಳಲಾಗಿದೆ.

ನಾನು ಖಾಸಗಿಯಾಗಿ ಈ ಬಗ್ಗೆ ತನಿಖೆ ಮಾಡಿಸಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಬಿಜೆಪಿ (BJP) ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು

ಮಾಡುತ್ತದೆ. ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ

ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” (Nasir Saab Zindabad) ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” (Pakistan) ಎಂದೇ

ಕೂಗಿದ್ದರೆ ಎಲ್ಲರಿಗೂ ಒಂದೇ (Priyank Kharge Clarity- Pakistan Zindabad) ರೀತಿ ಕೇಳಿಸಿರಬೇಕಲ್ಲವೇ?

ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ (Camera)

ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ,ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ

ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.

ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ?

ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಟೀಕಿಸಿದ್ದಾರೆ.

ಇನ್ನು ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ (Nasir Hussain) ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ

ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ಓದಿ: “ಪಾಕಿಸ್ತಾನ ಜಿಂದಾಬಾದ್” ಘೋಷಣೆಯನ್ನ ಯಾರೂ ಕೂಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Exit mobile version