ಚುನಾವಣೆ ಸೋಲಿನ ಭೀತಿಯಿಂದ ಕಾಯ್ದೆ ರದ್ದು – ಪ್ರಿಯಾಂಕ ಗಾಂಧಿ

ನವದೆಹಲಿ ನ 19: ಉತ್ತರ ಪ್ರದೇಶ ಸೇರಿದಂತೆ ಪ್ರಮುಖ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನು ರದ್ದುಪಡಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿಗೆ ವಿರುದ್ಧವಾಗಿ ದೇಶವನ್ನು ನಡೆಸುತ್ತಿರುವ ಯಾವುದೇ ಸರ್ಕಾರವನ್ನು ಮೋದಿ ಗುರುತಿಸಿದ್ದಾರೆ. ಯುಪಿ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕೃಷಿಕರಿಗೆ ಪೂರಕವಾದ ವಾತಾವರಣ ಇಲ್ಲದಿರುವುದು ಸಮೀಕ್ಷೆಯಿಂದ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೈತರ ಕ್ಷಮೆ ಕೇಳಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರ ಪುತ್ರನ ಕಾರು ಡಿಕ್ಕಿ ಆಗಿತ್ತು. ಕೃಷಿ ಕಾಯ್ದೆಯಲ್ಲಿ 600ಕ್ಕೂ ಹೆಚ್ಚು ರೈತರನ್ನು ಬಲಿ ತೆಗೆದುಕೊಂಡರೂ ಅವರು ಕದಲಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರನ್ನು ಪಕ್ಷದ ಮುಖಂಡರು ಅವಮಾನಿಸಿ, ರೈತರನ್ನು ಭಯೋತ್ಪಾದಕರು, ದರೋಡೆಕೋರರು, ಪುಂಡರು ಎಂದು ಬಣ್ಣಿಸಿ ಲಾಠಿ ಪ್ರಹಾರ ಮಾಡಿ ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

Exit mobile version