ಬಿಕಿನಿಯಾದರೂ ಧರಿಸಲಿ – ಪ್ರಿಯಾಂಕ ಗಾಂಧಿ!

gandhi

ಹಿಜಾಬ್‌ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಪ್ರತಿಕ್ರಿಯಿಸಿದ್ದು ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿರುವ ಟ್ವೀಟ್ ಈಗ ಹೊಸದೊಂದು ವಿವಾದವನ್ನು ಸೃಷ್ಟಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿರುವಾಗಲೇ ಟ್ವೀಟ್ ಮಾಡಿರುವ ಪ್ರಿಯಾಂಕಾ ವಾದ್ರಾ “ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ, ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಆಯ್ಕೆ ಹಾಗೂ ವಿವೇಚನೆಗೆ ಸಂಬಂಧಪಟ್ಟಿದ್ದು ಎಂದು ಹೇಳಿದ್ದಾರೆ.


ಆ ಹೆಣ್ಣು ಮಕ್ಕಳು ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು. ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ. ಇಲ್ಲವೇ ಹಿಜಾಬ್ ಆದರೂ ಹಾಕಲಿ, ಅವರಿಗೆ ಬೇಕಾದ ಬಟ್ಟೆ ಧರಿಸುವುದು ಅವರ ಹಕ್ಕಾಗಿರುತ್ತದೆ. ಭಾರತದ ಸಂವಿಧಾನವೇ ಇಂತಹ ಹಕ್ಕು ನೀಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಕರ್ನಾಟಕದಲ್ಲಿ ಹೆಚ್ಚಿದ ವಿವಾದ : ಕರ್ನಾಟಕದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕಿಡಿ ರಾಜ್ಯ-ರಾಷ್ಟ್ರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕುತ್ತಿದೆ. ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ದಿನಗಳವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಮಲಾಲ ಆಕ್ಷೇಪ : ಶಿಕ್ಷಣ ಮತ್ತು ಹಿಜಾಬ್ ನಡುವೆ ಯಾವುದು ಬೇಕು ಎಂಬ ಬಗ್ಗೆ ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ನಮ್ಮನ್ನು ಒತ್ತಾಯಿಸುತ್ತಿವೆ. ಹೆಣ್ಣುಮಕ್ಕಳು ಹಿಜಾಬ್ನಲ್ಲಿ ಶಾಲೆಗೆ ಬರಬಾರದು ಎಂದು ನಿರಾಕರಿಸುತ್ತಿರುವ ಬೆಳವಣಿಗೆಯು ತೀರಾ ಭಯಾನಕವಾಗಿದೆ. ಮಹಿಳೆಯರು ಧರಿಸುವ ಬಟ್ಟೆಯು ಹೆಚ್ಚಾಗಿರಬೇಕು ಅಥವಾ ಕಡಿಮೆ ಆಗಿರುವುದಕ್ಕೆ ಸಂಬಂಧಿಸಿದಂತೆ ಆಕ್ಷೇಪಗಳು ಮುಂದುವರಿಯುತ್ತಿವೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು,” ಎಂದು ಟ್ವೀಟ್ ಮಾಡಿದ್ದಾರೆ.

Exit mobile version