ಬೆಂಗಳೂರು ಫೆ 16 : ಬೆಂಗಳೂರಿನಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಪತ್ನಿ ಶೃತಿ ಅವರ ಮೊಬೈಲ್ ಕಸಿದು ಪರಾರಿಯಾಗಿದ್ದ ಐವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬೀ, ಅಸ್ಲಂ, ಮೊಹೀನ್, ಶೇಕ್ ಇಲಿಯಾಸ್ ಜೊತೆಗೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಕಳೆದ ಫೆ. 6ರಂದು ಡಾಲರ್ಸ್ ಕಾಲೋನಿಯಲ್ಲಿ ವಾಕಿಂಗ್ಗೆ ತೆರಳಿದ್ದ ಶೃತಿ ಅವರ ಮೊಬೈಲ್ ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ಕಳವು ಮಾಡಿದ ಮೊಬೈಲ್ ಅನ್ನು ಪಾದರಾಯನಪುರದಲ್ಲಿ ಮಾರಾಟ ಮಾಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಸದಾಶಿವನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ 30 ಪ್ರಕರಣಗಳನ್ನು ಭೇದಿಸಿದ್ದಾರೆ. ಮೊಯಿನ್ ಎಂಬಾತ ಪಾದರಾಯನಪುರದ ಅಸ್ಲಂಗೆ ಕದ್ದ ಮೊಬೈಲ್ಗಳನ್ನು ಮಾರುತ್ತಿದ್ದ ಎಂದು ಹೇಳಲಾಗಿದೆ. ಅಸ್ಲಂ ಎಂಬಾತ ಮೊಯಿನ್, ಜಬಿ ಸೇರಿದಂತೆ ಸಾಕಷ್ಟು ಹುಡುಗರನ್ನು ಮೊಬೈಲ್ ಕಳ್ಳತನ ಮಾಡಲು ಮುಂಗಡ ಹಣ ಕೊಟ್ಟು ಇಟ್ಟುಕೊಂಡಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರ ವಿಚಾರಣೆ ವೇಳೆ ಹೆಚ್.ಎಸ್.ಆರ್ ಲೇಔಟ್ ಠಾಣಾ ವ್ಯಾಪ್ತಿಯ ಪ್ರಕರಣಗಳೂ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ.
ಮೊಬೈಲ್ ಎಗರಿಸಲು ಈ ಗ್ಯಾಂಗ್ ಕದ್ದ ಬೈಕ್ ಹಾಗೂ ನಂಬರ್ ಪ್ಲೇಟ್ ಬದಲಿಸುತ್ತಿರುವುದು ಪತ್ತೆಯಾಗಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರಿಸಲಾಗಿದೆ. ಇಂದಿನಿಂದ ಪಿಯು, ಪದವಿ ಕಾಲೇಜುಗಳು ಪ್ರಾರಂಭ. ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಬುಧವಾರದಿಂದ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.

ವಿವಿಗಳು, ಕಾಲೇಜುಗಳಿಗೆ ಫೆ.16ರವರೆಗೆ ವಿಸ್ತರಿಸಿದ್ದ ರಜೆಯನ್ನು ರದ್ದುಪಡಿಸಿದ್ದ ಉನ್ನತ ಶಿಕ್ಷಣ ಇಲಾಖೆಯು ಫೆ.16 ರಿಂದಲೇ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಗೆ ಬರುವ ಎಲ್ಲಾ ಸರ್ಕಾರಿ, ಅನುದಾನಿಕ ಮತ್ತು ಅನುದಾನ ರಹಿತ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಭೌತಿಕ ತರಗತಿ ಆರಂಭಿಸುವಂತೆ ಮಂಗಳವಾರ ಸುತ್ತೋಲೆ ಹೊರಡಿಸಿತ್ತು. ಇದರಂತೆ ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜುಗಳು ಆರಂಭಗೊಂಡಿವೆ. ನಿನ್ನೆಯಷ್ಟೇ ಮಧ್ಯಂತರ ಆದೇಶ ಹೊರಡಿಸಿದ್ದ ಹೈಕೋರ್ಟ್’ನ ತ್ರಿಸದಸ್ಯ ಪೀಠ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಸಂಕೇತ ಬಳಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.