Visit Channel

ಪ್ರಿಯಾಂಕಾ ವಾದ್ರಾ ದಕ್ಷಿಣ ಭಾರತದತ್ತ ಗಮನ ಕೇಂದ್ರೀಕರಿಸಬೇಕು : ಡಿಕೆಶಿ!

DKS

ಕಾಂಗ್ರೆಸ್ ಪಕ್ಷದ(Congress Party) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ(Priyanka Vadra) ಅವರು ದಕ್ಷಿಣ ಭಾರತದತ್ತ(South India) ತಮ್ಮ ಗಮನವನ್ನು ಕೇಂದ್ರೀಕರಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ(Congress President) ಡಿ.ಕೆ.ಶಿವಕುಮಾರ್(DK Shivkumar) ಅಭಿಪ್ರಾಯಪಟ್ಟರು.

congress

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಕರ್ನಾಟಕವು ಕಾಂಗ್ರೆಸ್ ಪಕ್ಷದ ಭದ್ರ ನೆಲೆಯಾಗಿದೆ. ಮುಂದಿನ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ನಮ್ಮ ಪಕ್ಷದ ನಾಯಕಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕರ್ನಾಟಕದತ್ತ ತಮ್ಮ ಗಮನವನ್ನು ಕೇಂದ್ರೀಕರಿಸಬೇಕು. ಕಳೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಅವರು ಸಕ್ರಿಯವಾಗಿ ಐದು ರಾಜ್ಯಗಳಲ್ಲಿ ಪ್ರಚಾರ ನಡೆಸಿದ್ದರು.

ಹೀಗಾಗಿ ಕರ್ನಾಟಕದಲ್ಲಿ ನಡೆಯುವ ಚುನಾವಣೆಯಲ್ಲಿಯೂ ಅವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ನಾವು ವಿನಂತಿ ಮಾಡುತ್ತೇವೆ ಎಂದರು. ಇನ್ನು ರಾಜ್ಯಸಭಾ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಹೀಗಾಗಿ ನಮಗೆ ಬಹಳ ಸೀಮಿತ ಆಯ್ಕೆಗಳಿವೆ. ಈಗಾಗಲೇ ನಮ್ಮ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಿದ್ದೇನೆ.

DKS

ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ನಮ್ಮ ಪಕ್ಷದ ಸಂಪ್ರದಾಯದ ಪ್ರಕಾರ ಅಂತಿಮವಾಗಿ ಅಭ್ಯರ್ಥಿಯನ್ನು ನಮ್ಮ ಹೈಕಮಾಂಡ್ ಆಯ್ಕೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ಜೂನ್ 10ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಬಿಜೆಪಿಯ ನಿರ್ಮಲಾ ಸೀತಾರಾಮನ್, ಕೆ.ಸಿ.ರಾಮಮೂರ್ತಿ ಮತ್ತು ಕಾಂಗ್ರೆಸ್‍ನ ಜೈರಾಮ್ ರಮೇಶ್, ದಿವಂಗತ ಆಸ್ಕರ್ ಫರ್ನಾಂಡಿಸ್ ಅಧಿಕಾರವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ಜೂನ್ 10ರಂದು ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.