ಪಕ್ಷಕ್ಕೆ ಬಲ ನೀಡಲು ಪ್ರಿಯಾಂಕಾ ವಾದ್ರಾ ಪ್ರಚಾರ ನಡೆಸಲಿದ್ದಾರೆ : ಡಿಕೆಶಿ!

Congress

ಮುಂಬರುವ 2023ರಲ್ಲಿ ನಡೆಯುವ ಕರ್ನಾಟಕ(Karnataka) ವಿಧಾನಸಭಾ ಚುನಾವಣೆಯಲ್ಲಿ(Vidhansabha Election) ಕಾಂಗ್ರೆಸ್‍ನ(Congress) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ(Priyanka Vadra) ಅವರು ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್(State Congress) ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivkumar) ತಿಳಿಸಿದ್ದಾರೆ.

ನವದೆಹಲಿಯಲ್ಲಿ(NewDelhi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ವಾದ್ರಾ ಅವರು ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ. ಉದಯಪುರದಲ್ಲಿ ನಡೆದ ರಾಷ್ಟ್ರೀಯ ಚಿಂತನಾ ಶಿಬಿರದಲ್ಲಿ ಅವರನ್ನು ಭೇಟಿಯಾದ ರಾಜ್ಯ ಕಾಂಗ್ರೆಸ್ ನಿಯೋಗ ಪ್ರಚಾರಕಾರ್ಯದಲ್ಲಿ ಭಾಗಿಯಾಗಬೇಕೆಂದು ಅವರಿಗೆ ಮನವಿ ಮಾಡಿದೆ. ಅವರು ಬಹತೇಕ ಒಪ್ಪಿಗೆಯನ್ನು ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇನ್ನು ಇದೇ ಸಂದರ್ಭದಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಕುರಿತು ಮಾತನಾಡಿದ ಅವರು, ಟಿಕೆಟ್ ನೀಡುವ ವಿಚಾರವಾಗಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಹಗ್ಗ-ಜಗ್ಗಾಟ ನಡೆದಿಲ್ಲ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾವು ಸಭೆಯನ್ನು ನಡೆಸಿದ್ದೇವೆ. ಕೆಲ ಅಭ್ಯರ್ಥಿಗಳ ಹೆಸರನ್ನು ನಾವು ಸೂಚಿಸಿದ್ದೇವೆ. ಆದರೆ ಅಂತಿಮವಾಗಿ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಹೀಗಾಗಿ ಟಿಕೆಟ್ ನೀಡುವ ವಿಚಾರವಾಗಿ ಸಿದ್ದರಾಮಯ್ಯ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಸ್ಪಷ್ಟೀಕರಣ ನೀಡಿದ ಅವರು, ರಾಜ್ಯದಿಂದ ರಾಜ್ಯಸಭೆಗೆ ಪ್ರಿಯಾಂಕಾ ವಾದ್ರಾ ಅವರನ್ನು ಆಯ್ಕೆ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು. ಇನ್ನು ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರಿಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

Exit mobile version