ಕೋವಿಡ್ ಲಸಿಕೆಯ ಪ್ರಮಾಣಪತ್ರದ ಮಾಹಿತಿಗಳ ತಿದ್ದುಪಡಿಗೆ ಅವಕಾಶ

ನವದೆಹಲಿ, ಜೂ. 09: ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳಲ್ಲಿ ತಿದ್ದುಪಡಿಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ಫಲಾನುಭವಿಗಳು ‘ಕೋವಿನ್’ ವೆಬ್‌ಸೈಟ್‌ಗೆ ಭೇಟಿ ನೀಡಿ ತಿದ್ದುಪಡಿಗಳನ್ನು ಮಾಡಬಹುದು. ಲಸಿಕೆ ಪ್ರಮಾಣಪತ್ರದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಸೇರಿದಂತೆ ಇತರ ವಿವರಗಳು ತಪ್ಪಾಗಿ ನಮೂದಾಗಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದು ಆರೋಗ್ಯ ಸೇತು ಆಯಪ್ನ ಟ್ವಿಟರ್ ಖಾತೆಯಲ್ಲಿ ತಿಳಿಸಲಾಗಿದೆ.

‘ಕೋವಿನ್ ಲಸಿಕೆ ಪ್ರಮಾಣಪತ್ರ’ವನ್ನು ಪ್ರಯಾಣದ ಸಂದರ್ಭದಲ್ಲಿ ಹಾಗೂ ಇತರ ಕೆಲವು ನಿರ್ದಿಷ್ಟ ಸೇವೆಗಳನ್ನು ಪಡೆಯುವಾಗ ಹಾಜರುಪಡಿಸಬೇಕಾಗುತ್ತದೆ.

‘ಕೋವಿನ್’ ಪೋರ್ಟಲ್‌ನಲ್ಲಿ ನೋಂದಣಿ ಸಮಯದಲ್ಲಿ ನೀಡಿರುವ ಮೊಬೈಲ್‌ ಸಂಖ್ಯೆಯನ್ನು ಬಳಸಿ ಲಸಿಕೆಯ ಎಷ್ಟನೇ ಡೋಸ್ ಪಡೆಯಲಾಗಿದೆ ಎಂಬ ವಿವರವನ್ನು ಸಹ ಅಪ್‌ಡೇಟ್‌ ಮಾಡಬಹುದು ಎಂದೂ ತಿಳಿಸಲಾಗಿದೆ.ಅ

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.