Prtrol Price: ಏರಿಳಿತ ಕಾಣದ ಪೆಟ್ರೋಲ್, ಡಿಸೇಲ್ ದರ

ನವದೆಹಲಿ, ಡಿ. 17: ನವೆಂಬರ್‌ನಲ್ಲಿ ಪೆಟ್ರೋಲ್‌ ಡಿಸೇಲ್‌ ದರಗಳು ದಿನೇ ದಿನೇ ಹೆಚ್ಚಳವಾಗುತ್ತಿತ್ತು. ಕಳೆದ ನವೆಂಬರ್‌ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಕಳೆದ 10 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಇಂದು ವಿವಿಧ ನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಇಂತಿದೆ. ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83. 71 ಪೈಸೆ, ಡೀಸೆಲ್ ಬೆಲೆ 73. 87 ಪೈಸೆ ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 90. 34 ಪೈಸೆ ಇದ್ದರೆ, ಡಿಸೇಲ್ ಬೆಲೆ 80. 51 ಪೈಸೆ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 86. 51 ಪೈಸೆ ಇದ್ದರೆ, ಡೀಸೆಲ್ ಬೆಲೆ 79. 21 ಪೈಸೆ ಇದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 85.19 ಪೈಸೆ ಇದ್ದರೆ, ಡೀಸೆಲ್ ಬೆಲೆ 77. 44 ಪೈಸೆ ಇದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86. 51 ಪೈಸೆ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಲಾಕ್​ಡೌನ್​​ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿತ್ತು. ಆದರೆ ಕಳೆದ 10 ದಿನಗಳಿಂದ ಪೆಟ್ರೋಲ್​-ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.

Exit mobile version