ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 14 ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಇತ್ತೀಚೆಗೆ ಮುಕ್ತಾಯಗೊಂಡಿರುವ ದ್ವಿತೀಯ ಪಿಯುಸಿ ಫಲಿತಾಂಶ ಜು.14ರಂದು ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ಬರಲಿದೆ ಎಂಬುದಾಗಿ ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ನಡುವೆಯೂ ಬಾಕಿ ಉಳಿದಿದ್ದಂತ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆದ ನಂತರ ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ.
ಜು.14 ಮಧ್ಯಾಹ್ನ 12 ಗಂಟೆ ನಂತರ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ www.karresults.nic.in ನಲ್ಲಿ ಕೂಡ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.