ಬೆಂಗಳೂರು ಅ 31 : ಸ್ಯಾಂಡಲ್ವುಡ್ನ ಖ್ಯಾತ ನಟ ಪುನೀತ್ ರಾಜ್ಕುಮಾರ್ (46) ಇನ್ನಿಲ್ಲ ಶುಕ್ರವಾರ ಅ.29ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದರು. ಈ ಹಿನ್ನಲೆಯಲ್ಲಿ ಇಂದು ಕಂಠೀರವ ಸ್ಟುಡಿಯೋಲದಲಿ ಎರಡು ನಿಮಿಷಗಳ ಮೌನಾಚರಣೆಯ ಮೂಲಕ ಪುನೀತ್ಗೆ ಅಂತಿಮ ವಿದಾಯ ಸಲ್ಲಿಸಲಾಯಿತು.
ಕಂಠೀರವ ಸ್ಟುಡಿಯೊದಲ್ಲಿ ಪೊಲೀಸ್ ಬ್ಯಾಂಡ್ಗಳಿಂದ ರಾಷ್ಟ್ರ ಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸುವ ಮೂಲಕ ಪುನೀತ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ಗೆ ನಮನ ಸಲ್ಲಿಸಲಾಯಿತು.