ಮೈಸೂರು ನ 2 : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿ ಮಾತನಾಡಿದ ಅವರು, ಪ್ರದ್ಮಶ್ರೀ ಪ್ರಶಸ್ತಿಗಾಗಿ ಸಮಯ ಸಂದರ್ಭ ನೋಡಿಕೊಂಡು ಸರ್ಕಾರ ಪ್ರಸ್ತಾಪ ಸಿದ್ಧಪಡಿಸಲಿದೆ ಎಂದು ಹೇಳಿದರು.
ಪುನೀತ್ ರಾಜ್ ಕುಮಾರ್ಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಆಗ್ರಹಿಸಿದ ಸಿದ್ದರಾಮಯ್ಯ ಟ್ವಿಟ್ ವಿಚಾರವಾಗಿ ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಎಲ್ಲದಕ್ಕೂ ಒಂದು ನಿಯಮ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ ಎಂದಿದ್ದಾರೆ.
ಪುನೀತ್ ರಾಜುಮಾರ್ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.