ಬೆಂಗಳೂರು ನ 8 : ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ರಾಜ್ಯದ ಚಿತ್ರಮಂದಿರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಇಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ ಹಾಗೂ ಭಾಷ್ಪಾಂಜಲಿ ಮೂಲಕ ರಾಜ್ಯದ ಎಲ್ಲಾ ಚಿತ್ರಮಂದಿರಗಳ ಆವರಣದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.
ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ಹಾಗೂ ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಳ ಕಾರ್ಯಕ್ರಮ ಆಯೋಜಿಸುತ್ತಿದೆ.