ಪುನೀತ್ ಪುಣ್ಯಾರಾಧನೆಗೆ ಕಣ್ಣೀರಧಾರೆ ಹರಿಸಿದ ಅಭಿಮಾನಿಗಳು

 ಬೆಂಗಳೂರು ನ 9 : ನಟ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ಪುಣ್ಯಾರಾಧನೆ ಅಂಗವಾಗಿ ಡಾ.ರಾಜ್ ಕುಟುಂಬಸ್ಥರು ನಗರದ ಅರಮನೆ ಮೈದಾನದಲ್ಲಿ 25 ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಂಡಿದ್ದುಈ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅರಮನೆ ಮೈದಾನಕ್ಕೆ ಆಗಮಿಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್​, ಅಪ್ಪುಗೆ ಎಲ್ಲರನ್ನು ಕರೆಸಿ ಊಟ ಹಾಕಿಸಬೇಕೆಂಬ ಆಸೆ ಇತ್ತು. ಎಲ್ಲರ ಸಹಕಾರದಿಂದ ಇಂದು ಕಾರ್ಯಕ್ರಮ ಸಾಕಾರಗೊಂಡಿದೆ. ಎಲ್ಲರೂ ಊಟ ಮಾಡಿಕೊಂಡು ಜೋಪಾನವಾಗಿ ಮನೆಗೆ ಹೋಗಿ ಎಂದು ಮನವಿ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಈಗಾಗಲೇ ಸಕಲ ವ್ಯವಸ್ಥೆ ಮಾಡಲಾಗಿದ್ದು, ಏಕಕಾಲಕ್ಕೆ 5 ಸಾವಿರ ಜನರು ಊಟ ಮಾಡಲು ಬೇಕಾಗುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸುಮಾರು 25 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಒಂದುವೇಳೆ, ಈ ಸಂಖ್ಯೆ ಇನ್ನೂ ಹೆಚ್ಚಾದರೆ, ಅದಕ್ಕೂ ಬೇಕಾದ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ವೆಜ್ & ನಾನ್ ವೆಜ್ ಶೈಲಿಯ ಊಟ ಇರಲಿದ್ದು, ಸುಮಾರು 1 ಸಾವಿರ ಬಾಣಸಿಗರು ಸೋಮವಾರದಿಂದಲೇ ಕೆಲಸ ಶುರು ಮಾಡಿದ್ದರು. ಅಡುಗೆಗೆ 1 ಸಾವಿರ ಕೆಜಿ ಸೋನಾ ಮಸೂರಿ ಅಕ್ಕಿ, 750 ಲೀಟರ್ ಎಣ್ಣೆ, ಕೆಜಿಗಟ್ಟಲೇ ಈರುಳ್ಳಿ, ಬೆಳ್ಳುಳ್ಳಿ, ಟೊಮ್ಯಾಟೊ, ಪುದೀನಾ, ಕೊತ್ತಂಬರಿ ಸೊಪ್ಪು ಕಟ್ಟು, ರಾಶಿ ರಾಶಿ ದಿನಸಿಗಳನ್ನು ರಾಜ್ ಕುಟುಂಬವು ಪೂರೈಸಿದೆ. 3 ಸಾವಿರ ಕೆ.ಜಿ. ಚಿಕನ್, 8,500 ಕೋಳಿ ಮೊಟ್ಟೆ ಬಳಸಿ ಅಡುಗೆ ಮಾಡಲಾಗಿದೆ.

ಸಸ್ಯಾಹಾರಿ ಅಡುಗೆಯಲ್ಲಿ ಆಲೂ ಕಬಾಬ್, ಬೇಬಿ ಕಾರ್ನ್, ಘೀ ರೈಸ್-ಕುರ್ಮ, ಅನ್ನ-ರಸಂ, ಅಕ್ಕಿ ಪಾಯಸ, ಮಸಾಲೆ ವಡೆ ಇದೆ. ಇನ್ನು ನಾನ್ ವೆಜ್ ಆಹಾರಪ್ರಿಯರಿಗೆ ಕೋಳಿ ಮೊಟ್ಟೆ, ಚಿಕನ್ ಕಬಾಬ್, ಚಿಕನ್ ಚಾಪ್ಸ್, ಘೀ ರೈಸ್, ಅನ್ನ-ರಸಂ ಇರಲಿದೆ. ಸೌದೆ ಒಲೆಯಲ್ಲಿ ಬಾಣಸಿಗರು ಅರಮನೆ ಮೈದಾನದಲ್ಲಿ ತಯಾರಿಸಿದ್ದಾರೆ. ಈಗಾಗಲೇ ಅಡುಗೆ ತಯಾರಾಗಿದ್ದು,11 ಗಂಟೆಯ ಬಳಿಕ ಅರಮನೆ ಮೈದಾನಕ್ಕೆ ಬರುವ ಅಭಿಮಾನಿಗಳು, ಗಣ್ಯರಿಗೆ ಊಟ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ದೊಡ್ಮನೆ ಕುಟುಂಬದವರು ಕೂಡ ಈಗಾಗಲೇ ಅರಮನೆ ಮೈದಾನಕ್ಕೆ ಆಗಮಿಸಿದ್ದಾರೆ.

ಅನ್ನಸಂತರ್ಪಣೆ ವೇಳೆ ಪುನೀತ್​ ಪತ್ನಿ ಅಶ್ವಿನಿ, ನಟ ಶಿವರಾಜ್​ಕುಮಾರ್ , ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಶಿವಣ್ಣ ತಾವೇ ಸ್ವತಃ ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.