ಬೆಂಗಳೂರು ಅ 31 : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು
ಲಕ್ಷಾಂತರ ಅಭಿಮಾನಿಗಳು 2 ದಿನ ದರ್ಶನ ಪಡೆದ ಪುನೀತ್ ಪಾರ್ತಿವ ಶರೀರವನ್ನು ಪೊಲೀಸ್ ಭದ್ರತೆಯಲ್ಲಿ ಕಂಠೀರವ ಸ್ಟುಡಿಯೋಗೆ ತರಲಾಯಿತು. ಈ ವೇಳೆ ಪುನೀತ್ ಪಾರ್ಥಿವ ಶರೀರಕ್ಕೆ ಪೊಲೀಸ್ ಬ್ಯಾಂಡ್ ಮತ್ತು ರಾಷ್ಟ್ರಗೀತೆಯೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ ಅವರ ಪಾರ್ಥಿವ ಶರೀರಕ್ಕೆ ಅಂತಿಮನಮನ ಸಲ್ಲಿಸಿದರು. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಪನೀತ್ ಕೆನ್ನೆ ಸವರಿ ಅಶ್ರುತರ್ಪಣ ಅರ್ಪಿಸಿದರು. ಈ ಸಂದರ್ಭದಲ್ಲಿ ಕೆಲ ಹೊತ್ತು ಸಿಎಂ ಭಾವುಕರಾದರು ನಂತರ ಪುನೀತ್ ರಾಜ್‌ಕುಮಾರ್ ಅಂತಿಮಯಾತ್ರೆ ಆರಂಭವಾಯಿತು.