ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌ಗೆ ಲಘು ಹೃದಯಾಘಾತ

ಬೆಂಗಳೂರು ಅ 29 : ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಪುನೀತ್ ರಾಜ್‍ಕುಮಾರ್ ಕುಸಿದು ಬಿದ್ದಿದ್ದಾರೆ. ಈ ವೇಳೆ ರಮಣಶ್ರೀ ಆಸ್ಪತ್ರೆಯಲ್ಲಿ ಮೊದಲು ಪ್ರಥಮ ಚಿಕ್ಸಿ ಕೊಡಿಸಲಾಗಿದೆ. ನಂತರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಈಗಾಗಲೇ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಹೃದ್ರೋರೋಗ ತಜ್ಞರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Exit mobile version