ಪುನೀತ್‌ ಸಾವಿನ ಹಿನ್ನಲೆ, ರಾಯಚೂರಲ್ಲಿ ಇಬ್ಬರು ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ

ರಾಯಚೂರು ಅ 30 : ಸ್ಯಾಂಡಲ್​ವುಡ್ ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ

ಪುನೀತ್​ ಸಾವಿನಿಂದ ನೊಂದು ಇಬ್ಬರು ಆತ್ಮಹತ್ಯೆಗೆ ಯತ್ನಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದ್ದು, ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಇಬ್ಬರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇವರಿಬ್ಬರು ಪವರ್​ ಸ್ಟಾರ್​ ಅವರ ಅಪ್ಪಟ ಅಭಿಮಾನಿಗಳಾಗಿದ್ದು, ನಿನ್ನೆ ಪುನೀತ್​ ಅವರ ನಿಧನದ ಸುದ್ದಿಕೇಳಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ. ಎಂದು ತಿಳಿದು ಬಂದಿದೆ.

Exit mobile version