• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪವರ್‌ ಕಳೆದುಕೊಂಡ ಸ್ಯಾಂಡಲ್‌ವುಡ್‌, ಕರ್ನಾಟಕದ ಅಪ್ಪು ಇನ್ನು ನೆನಪು ಮಾತ್ರ

Preetham Kumar P by Preetham Kumar P
in ಪ್ರಮುಖ ಸುದ್ದಿ
ಪವರ್‌ ಕಳೆದುಕೊಂಡ ಸ್ಯಾಂಡಲ್‌ವುಡ್‌, ಕರ್ನಾಟಕದ ಅಪ್ಪು ಇನ್ನು ನೆನಪು ಮಾತ್ರ
0
SHARES
1
VIEWS
Share on FacebookShare on Twitter

ಬೆಂಗಳೂರು ಅ 29 : ಚಿತ್ರನಟ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

1975, ಮಾರ್ಚ್ 17 ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದರು.ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ಇವರು ರಾಜ್ ದಂಪತಿಗಳ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದರು. ಪುನೀತ್ ಮತ್ತು ಸಹೋದರಿ ಪೂರ್ಣಿಮಾರನ್ನು,ರಾಜ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್‌ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಹೀಗಾಗಿ ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಯಿತು.

ಬಾಲಕಲಾವಿದನಾಗಿ ಪುನೀತ್ ಅಭಿನಯಿಸಿದ ಉತ್ಕೃಷ್ಟ ಚಿತ್ರ `ಬೆಟ್ಟದ ಹೂ’. 1984 ರಲ್ಲಿ ತೆರೆಕಂಡ ಎನ್ ಲಕ್ಷ್ಮಿ ನಾರಾಯಣ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಬಾಲಕ ರಾಮು ಆಗಿ ನಟಿಸಿದರು. ಶಾಲೆಗೆ ಹೋಗುವ ಬಡ ಬಾಲಕನೊಬ್ಬನ ತಳಮಳಗಳನ್ನು ಚಿತ್ರ ಚೆನ್ನಾಗಿ ಬಿಂಬಿಸಿತು. ಈ ಚಿತ್ರ ಇಂಗ್ಲೀಷ್ ಕಾದಂಬರಿ `ವಾಟ್ ದೆನ್ ರಾಮನ್’ ಆಧಾರಿತವಾಗಿತ್ತು. ಈ ಚಿತ್ರದ ಅಭಿನಯಕ್ಕಾಗಿ ಪುನೀತ್‌ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು.

ನಾಯಕ ನಟನಾಗಿ ಜೀವನ

2002 ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ `ಅಪ್ಪು’ ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು. ನಂತರ ತೆರೆಗೆ ಬಂದ ಅಭಿ,ವೀರ ಕನ್ನಡಿಗ,ಮೌರ್ಯ,ಆಕಾಶ್ ,ನಮ್ಮ ಬಸವ, ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡವು. 

ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ.ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್,ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ

ನಟನೆ ಮಾತ್ರವಲ್ಲದೆ ಗಾಯಕ, ನಿರ್ಮಾಪಕ ಮತ್ತು ನಿರೂಪಕ

ಗಾಯಕನಾಗಿ ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್, ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸುತ್ತಾರೆ.ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ. ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷ.

ಚಿತ್ರ ನಿರ್ಮಾಪಕರಾಗಿ `ಕವುಲುದಾರಿ’, `ಮಯಾಬಜಾರ್’ ಎಂಬ ಚಿತ್ರಗಳನ್ನು ತಮ್ಮ ಹೋಮ್ ಬ್ಯಾನರ್‌ನಲ್ಲಿಯೇ ನಿರ್ಮಸಿರುವ ಪುನೀತ್ ತಮ್ಮ ಪ್ರೋಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಅರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಪವರಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟ. ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ,ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಸಾಂಸರಿಕ ಜೀವನ  : 1999 ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ಕೈಹಿಡಿದರು.ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.

 ನಂದಿನಿ ರಾಯಭಾರಿಯಾಗಿ ಅಪ್ಪು: ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ `ಬೆಂಗಳೂರು ಪ್ರೀಮೀಯರ್ ಪುಟ್‌ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ.ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.