ಚಂಡೀಗಡ, ಎ. 01: ಪಂಜಾಬ್ನ ಮಹಿಳಾ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದನ್ನು ರಾಜ್ಯ ಸರ್ಕಾರ ನೀಡಿದೆ. ರಾಜ್ಯದೊಳಗೆ ಸಂಚರಿಸುವ ಎಲ್ಲಾ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸೇವೆ ನೀಡುವುದಾಗಿ ಪಂಜಾಬ್ ಸರ್ಕಾರ ಘೋಷಣೆ ಮಾಡಿದೆ. ಅದರಂತೆ ಇಂದಿನಿಂದಾ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯದೊಳಗೆ ಉಚಿತ ಬಸ್ ಸೌಲಭ್ಯ ಸಿಗಲಿದೆ. ಈ ಯೋಜನೆಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ತಿಂಗಳ ಆರಂಭದಲ್ಲಿ ಘೋಷಿಸಿದ್ದರು.
ಈ ಯೋಜನೆಯಿಂದ ರಾಜ್ಯದ ಸುಮಾರು 1.31 ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ. 2011ರ ಜನಗಣತಿಯಂತೆ ಪಂಜಾಬ್ನಲ್ಲಿ 2.77 ಕೋಟಿ ಜನಸಂಖ್ಯೆ ಇದೆ. ಅದರಲ್ಲಿ 1,46,39,465 ಪುರುಷರು ಹಾಗೂ 1,31,03,873 ಮಹಿಳೆಯರಿದ್ದಾರೆ.