• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಚಿತ್ರೋದ್ಯಮಕ್ಕಾಗಿ ಸಿಎಂಗೆ ಪುರಾಣಿಕ್ ಮನವಿ

Sharadhi by Sharadhi
in ಮನರಂಜನೆ
ಚಿತ್ರೋದ್ಯಮಕ್ಕಾಗಿ ಸಿಎಂಗೆ ಪುರಾಣಿಕ್ ಮನವಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 27: ಕೊವಿಡ್ -19 ಲಾಕ್ ಡೌನ್ ನಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್ ಡೌನ್ ಗೆ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಲಕ್ಷಾಂತರ ಕಾರ್ಮಿಕರು ದಿನಗೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಅವರ ಕುಟುಂಬ ಇಂದು ಬೀದಿಗೆ ಬೀಳುವಂತಾಗಿದೆ ಆದ್ದರಿಂದ ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು‌ ಮನವಿಯಲ್ಲಿ ಕೋರಿದ್ದಾರೆ.
2020ರ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6000ಕುಟುಂಬಗಳಿಗೆ ತಲಾ ₹3000 ಮೌಲ್ಯದ ದಿನಸಿ ಪಡಿತರ ರಿಲೆಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ. ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಟ ತಲಾ₹ 5000 ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಕನಿಷ್ಟ ಆಸರೆ ಆದದಂತಾಗುತ್ತದೆ ಎಂದು ಅವರು ಕೋರಿದರು.

ನಿಯೋಗದಲ್ಲಿದ್ದ ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರು, ಚಿತ್ರೋದ್ಯಮ ಸಾಕಷ್ಟು ಮಂದಿನ ಕೋವಿಡ್ ಲಸಿಕೆ ಪಡೆದಿರುವುದಿಲ್ಲ. ಕೆಲವರು ವಯಸ್ಸಿನ ಕಾರಣ ಸರದಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದೆ ಲಸಿಕೆ ಮೊದಲು ಡೋಸ್ ಪಡೆದಿರುವುದಿಲ್ಲ. ಆದ್ದರಿಂದ ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ ಅವರು ಮುಖ್ಯಮಂತ್ರಿಯವರನ್ನು ಕೋರಿದರು.

ಮನವಿಯನ್ನು ಸ್ವೀಕರಿಸಿದ ಮಾನ್ಯ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್ ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ಪುರಾಣಿಕ್ ತಿಳಿಸಿದರು.

ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡೆಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ, ವಿಶೇಷವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷರು ಹಾಗೂ ನಿರ್ಮಾಪಕ ಸಂಘದ ಅಧ್ಯಕ್ಷರಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ.

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.