Visit Channel

ಮೇಕೆದಾಟು ಯೋಜನೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತನ್ನಿ: ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

jpg (1)

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ.
ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ.

‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.
ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು. ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಒತ್ತಾಯಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.