ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

Bengaluru: ರಾಜ್ಯದಲ್ಲಿರುವ 550ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳು ಮತ್ತು ಪ್ರಮುಖ ಐತಿಹಾಸಿಕ ದೇವಾಲಯಗಳನ್ನು ಖಾಸಗಿ ಕಂಪನಿಗಳಿಗೆ ದತ್ತು ನೀಡುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಹೆಚ್ಚಿನ ವೇಗ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ತಿಳಿಸಿದ್ದಾರೆ.

ಎಫ್ಕೆಸಿಸಿಐಯಲ್ಲಿ (AFKCCI) ಹಮ್ಮಿಕೊಂಡಿದ್ದ ‘ದಕ್ಷಿಣ ಭಾರತ್ ಉತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಸಗಿ ವಲಯ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ಸುಕವಾಗಿದ್ದು ಈ ಕ್ಷೇತ್ರಕ್ಕೆ 500 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹರಿದು ಬರಲಿದೆ. ಇದರಿಂದ ಕರ್ನಾಟಕದಲ್ಲಿ (Karnataka) ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಮತ್ತು ಬಂಡವಾಳ ಸೃಷ್ಟಿಯಾಗುತ್ತದೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಚ್ಕೆ ಪಾಟೀಲ್ (H K Patil) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಐತಿಹಾಸಿಕ ಸ್ಮಾರಕಗಳು ಖಾಸಗಿ ವಲಯಗಳಿಗೆ ದತ್ತು ಸ್ವೀಕಾರಕ್ಕೆ ಲಭ್ಯವಿವೆ. ಸ್ಮಾರಕಗಳು, ದೇವಾಲಯಗಳು, ಚರ್ಚ್ಗಳು (Church), ಮಸೀದಿಗಳು ಮತ್ತು ಇತರೆ ಪಾರಂಪರಿಕ ಸ್ಥಳಗಳನ್ನು ಪ್ರವಾಸೋದ್ಯಮಕ್ಕೆ ನೀಡಲಾಗುವುದು. ಈ ವಿನೂತನ ಯೋಜನೆಯನ್ನು ಸೆಪ್ಟೆಂಬರ್ (September) ಕೊನೆಯ ವಾರದಲ್ಲಿ ಆರಂಭಿಸಲಾಗುವುದು. ನಮ್ಮ ರಾಜ್ಯದಲ್ಲಿ ಬಾದಾಮಿ, ಹಂಪಿ, ಹೊಯ್ಸಳ ದೇವಾಲಯಗಳು ಸೇರಿದಂತೆ ನಾಲ್ಕು ಪಾರಂಪರಿಕ ತಾಣಗಳು ಯುನೆಸ್ಕೋದಿಂದ ಮಾನ್ಯತೆ ಪಡೆದಿದ್ದು,

ಮುಂದಿನ ದಿನಗಳಲ್ಲಿ ಅವುಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದೆ. ಇನ್ನು ಕಾಂಗ್ರೆಸ್ (Congress) ಸರಕಾರದ ಶಕ್ತಿ ಯೋಜನೆಯಿಂದಾಗಿಯೂ ರಾಜ್ಯದ ಪ್ರವಾಸಿ ಕೇಂದ್ರಗಳು ಮತ್ತು ದೇಗುಲಗಳಿಗೆ ಹೆಚ್ಚಿನ ಜನರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಖಾಸಗಿ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ಸಚಿವ ಎಚ್ಕೆ ಪಾಟೀಲ್ ತಿಳಿಸಿದ್ದಾರೆ.

ಎಫ್ಕೆಸಿಸಿಐಯಲ್ಲಿ ಹಮ್ಮಿಕೊಂಡಿದ್ದ ‘ದಕ್ಷಿಣ ಭಾರತ್ ಉತ್ಸವ’ ಕಾರ್ಯಕ್ರಮದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷ ಜಿ.ಕೆ. ಶೆಟ್ಟಿ (G K Shetty), ಪ್ರವಾಸೋದ್ಯಮ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಕಪಿಲ್ ಮೋಹನ್ಹಾ (Kapil Mohan) ಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version