vijaya times advertisements
Visit Channel

Elizabeth II : ಬ್ರಿಟನ್‌ನ ದೀರ್ಘಾವಧಿಯ ರಾಣಿ ಎಲಿಜಬೆತ್ II ನಿಧನ! ; ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ

Queen

Elizabeth II : ರಾಣಿ (Queen) ಎಲಿಜಬೆತ್ II (Elizabeth 2), 1926-2022, ದೀರ್ಘಕಾಲ ಆಳ್ವಿಕೆ ನಡೆಸಿದ ರಾಣಿಯಾಗಿ ಪ್ರಸಿದ್ದರಾಗಿದ್ದಾರೆ. ಎಲಿಜಬೆತ್ ತನ್ನ ತಂದೆ ಕಿಂಗ್ ಜಾರ್ಜ್ IIರ ಮರಣದ ನಂತರ 1952 ರಲ್ಲಿ 25 ನೇ ವಯಸ್ಸಿನಲ್ಲಿ ರಾಣಿಯಾದರು.

Elizabeth

ಬ್ರಿಟನ್‌ನ ದೀರ್ಘಾವಧಿಯ ರಾಣಿ ಎಂದೇ ಪ್ರಸಿದ್ಧಿ ಹೊಂದಿದ್ದ ರಾಣಿ ಎಲಿಜಬೆತ್ ಅವರು, ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕಿ ಎಂಬ ಖ್ಯಾತಿಯನ್ನೂ ಹೊಂದಿದ್ದರು. ಆದರೆ ಇದೀಗ ಅವರು ತಮ್ಮ 96ನೇ ವಯಸ್ಸಿನಲ್ಲಿ ವೈದ್ಯರ ಚಿಕಿತ್ಸೆಗೆ ಸ್ಪಂದಿಸದೆ ನಿಧನ(Death) ಹೊಂದಿದ್ದಾರೆ.

https://youtu.be/oO6xPuat8yI

ಕ್ವೀನ್ ಎಲಿಜಬೆತ್ ಅವರ ನಿಧನಕ್ಕೆ ವಿಶ್ವಾದ್ಯಂತ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಇನ್ನು, ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಿದ್ದು, ಶುಕ್ರವಾರ ಲಂಡನ್‌ಗೆ ಒಯ್ಯಲಾಗುವುದು ಎಂದು ಅರಮನೆಯ ಮೂಲಗಳು ತಿಳಿಸಿವೆ.

ಕ್ವೀನ್‌ 2ನೇ ಎಜಿಜಬೆತ್‌ ಅವರಿಗೆ ನಾಲ್ವರು ಮಕ್ಕಳಿದ್ದು, ಹಿರಿಯ ಮಗ ವೇಲ್ಸ್‌ನ ರಾಜಕುಮಾರ, 73 ವರ್ಷದ ಚಾರ್ಲ್ಸ್‌ ಅವರು ತಕ್ಷಣದಿಂದಲೇ ರಾಜನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

1952ರಲ್ಲಿ ಸಿಂಹಾಸನವನ್ನು ಏರಿದ ಎಲಿಜಬೆತ್ ರಾಜಕೀಯ ಕ್ರಾಂತಿಯ ಸಮಯದಲ್ಲಿ ಯುಕೆಯನ್ನು ಮುನ್ನಡೆಸಿದರು.

England

1837ರಿಂದ 1901ರವರೆಗೆ ಆಳಿದ ರಾಣಿ ವಿಕ್ಟೋರಿಯಾ ಅವರ ದಾಖಲೆಯನ್ನು ಎಲಿಜಬೆತ್‌ ಮುರಿದಿದ್ದರು. ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರಾಗಿ 2015ರಲ್ಲಿ ಗುರುತಿಸಿಕೊಂಡರು.

ಸದ್ಯ 96 ವರ್ಷ ಪೂರೈಸಿದ್ದ ರಾಣಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ರಾಣಿ ಎಲಿಜಬೆತ್‌ ಅವರಿಗೆ ಸೂಕ್ತ ವೈದ್ಯಕೀಯ ನಿಗಾವಣೆಯೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಎಲಿಜಬೆತ್ ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲೇ ಇದ್ದರು ಎಂದು ಹೇಳಲಾಗುತ್ತಿತ್ತು. ವೈದ್ಯರು ಕೂಡ ಅವರ ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿತ್ತು.

ಗುರುವಾರ ಮದ್ಯಾಹ್ನ ಎಲಿಜಬೆತ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತು, ಅವರನ್ನು ತೀವ್ರ ನಿಗದಲ್ಲಿಯೇ ಇರಬೇಕು ಎಂದು ವೈದ್ಯರು ಶಿಫಾರಸ್ಸು ಮಾಡಿದ್ದರು.

ಇದನ್ನೂ ಓದಿ : https://vijayatimes.com/health-facts-of-betel-nut/

ಸುದ್ದಿ ತಿಳಿದ ತಕ್ಷಣವೇ ಅವರ ಮಕ್ಕಳಾದ ಜಾರ್ಲ್ಸ್, 72 ವರ್ಷದ ರಾಜಕುಮಾರಿ ಆ್ಯನೆ, 62 ವರ್ಷದ ಆಂಡ್ರ್ಯೂ ಮತ್ತು 58 ವರ್ಷದ ಎಡ್ವರ್ಡ್ ಅವರು ಬಾಲ್ ಮೊರಲ್ ನಲ್ಲಿ ಇರುವ ರಾಣಿಯ ಎಸ್ಟೇಟಿಗೆ ಧಾವಿಸಿದರು.

ರಾಣಿ ಎಲಿಜಬೆತ್ ಅವರು ಗುರುವಾರ ಮಧ್ಯಾಹ್ನ ಬಲ್ಮೋರಲ್‌ನಲ್ಲಿ ನಿಧನ ಹೊಂದಿದ್ದಾರೆ ಎಂದು ಬ್ರಿಟನ್‌ನ ಬಕಿಂಗ್‌ ಹ್ಯಾಮ್‌ ಅರಮನೆಯ ಮೂಲಗಳು ತಿಳಿಸಿವೆ.

Latest News

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು