Visit Channel

ಆರ್.ಅಶೋಕ್ ಗ್ರಾಮ ವಾಸ್ತವ್ಯ- ಎತ್ತಿನ ಗಾಡಿಯಲ್ಲಿ ಸಂಚಾರ

ashokEX

ಬೆಂಗಳೂರು,ಫೆ.20: ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಹೂಡಿದ್ದು, ಗ್ರಾಮದಲ್ಲಿ ಎತ್ತಿನಗಾಡಿಯಲ್ಲಿ ಸಂಚರಿಸುವ ಮೂಲಕ ಗಮನ ಸೆಳೆದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು, ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಪೂರ್ಣ ಕುಂಭ, ಜಾನಪದ ಕಲಾತಂಡಗಳೊಂದಿಗೆ ಗ್ರಾಮಸ್ಥರು ಸ್ವಾಗತ ಕೋರಿದ್ದಾರೆ. ಎತ್ತಿನ ಗಾಡಿಯಲ್ಲೇ ವಾಸ್ತವ್ಯದ ಸ್ಥಳಕ್ಕೆ ತೆರಳಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಆರ್.ಅಶೋಕ್ಗೆ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಶ್ರೀನಿವಾಸ್, ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬುದು ಸಚಿವ ಆರ್.ಅಶೋಕ್ ಕನಸಿನ ಕಾರ್ಯಕ್ರಮವಾಗಿದ್ದು, ಇದನ್ನು ನೆಲಮಂಗಲ ತಾಲೂಕಿನ ಹೊನ್ನರಾಯನಹಳ್ಳಿಯಲ್ಲಿ ಉದ್ಘಾಟನೆ ಮಾಡಲಾಯಿತು. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ವಿನೂತನ ಕಾರ್ಯಕ್ರಮ ಇದಾಗಿದೆ. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದು, ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.