Visit Channel

ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ವಿಧಿವಶ

ಕೋಲಾರ ಡಿ 17 : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ  ಆರ್.ಎಲ್‌. ಜಾಲಪ್ಪ ಅವರು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು  ಚಿಕಿತ್ಸೆ ಫಲಕಾರಿಯಾಗದೇ ಇಂದು ಆರ್. ಎಲ್. ಜಾಲಪ್ಪ (96) ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಡಿ.10ರಂದು ಕೋಲಾರದ(olar) ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಇದೇ  ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕತ್ಸೆ ಮಾಡಲಾಗಿತ್ತು. 

ಕರ್ನಾಟಕದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ(Chikkaballapur) ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಜಾಲಪ್ಪ ಆರೋಗ್ಯ ವಿಚಾರಿಸಿದ್ದರು.
ಚಿಕ್ಕಬಳ್ಳಾಪುರ ಸಂಸದರಾಗಿದ್ದ ಆರ್. ಎಲ್. ಜಾಲಪ್ಪ 4 ಬಾರಿ ಗೆಲುವು ಸಾಧಿಸಿದ್ದರು. ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದರು. ಶುಕ್ರವಾರ ಬೆಳಗ್ಗೆಯಿಂದಲೇ ಆರ್.‌ ಎಲ್. ಜಾಲಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸಂಜೆ ಅವರು ವಿಧಿವಶರಾಗಿದ್ದಾರೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಆರ್. ಎಲ್. ಜಾಲಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರಾದ ಶ್ರೀ ಆರ್.ಎಲ್.ಜಾಲಪ್ಪ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜ್ಯದ ಜನಪ್ರಿಯ ನಾಯಕರಾಗಿ ದೀನ, ದಲಿತರು, ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಅವರು ಶ್ರಮಿಸಿದ್ದರು. ಕೃಷಿ, ಆರ್ಥಿಕ ಸುಧಾರಣೆ, ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಅವರ ಸೇವೆ ಅನನ್ಯವಾಗಿತ್ತು” ಎಂದು ಟ್ವಿಟ್ ಮಾಡಿದ್ದಾರೆ.

ಜಾಲಪ್ಪ ಅವರ ನಿರ್ವಹಿಸಿದ ವಿವಿಧ ಹುದ್ದೆಗಳು :

1980-83 ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು
1983-96 ಸದಸ್ಯರು, ಕರ್ನಾಟಕ ವಿಧಾನಸಭೆ
1983-84 ಮತ್ತು 1985-86 ಮಂತ್ರಿ, ಸಹಕಾರ, ಕರ್ನಾಟಕ ಸರ್ಕಾರ
1986-87 ಮಂತ್ರಿ, ಗೃಹ ವ್ಯವಹಾರಗಳ, ಕರ್ನಾಟಕ ಸರ್ಕಾರ
1995-96 ಸಚಿವ, ಕಂದಾಯ, ಕರ್ನಾಟಕ ಸರ್ಕಾರ
1996 11 ನೇ ಲೋಕಸಭೆಗೆ ಚುನಾಯಿತ ಜವಳಿ
1996-98 ಕೇಂದ್ರ ಜವಳಿ ಸಚಿವ
1998 12 ನೇ ಲೋಕಸಭೆ ಮರುಚುನಾಯಿತರಾದವರು(2 ನೇ ಪದ)
1998-99 ಸದಸ್ಯರು, ಹಣಕಾಸು ಸಮಿತಿ ಸದಸ್ಯ, ಸಂಸತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದಸ್ಯರು ಸಮಿತಿ , ಸಲಹಾ ಸಮಿತಿಯ ಸದಸ್ಯರು ಕೃಷಿ ಸಚಿವಾಲಯ.
1999 ಮರುಚುನಾಯಿತರಾದವರು 13 ನೇ ಲೋಕಸಭೆ (3 ನೇ ಪದ)
1999-2000 ಸದಸ್ಯರು, ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರು.
2004 ಮರುಚುನಾಯಿತರಾದವರು 14 ಲೋಕಸಭೆ (4ನೇ ಅವಧಿಗೆ),
2006 ಮಾನವ ಸಂಪನ್ಮೂಲ ಅಭಿವೃದ್ಧಿ ಸಮಿತಿಯ ಸದಸ್ಯರು

Latest News

Aadhar Card
ಡಿಜಿಟಲ್ ಜ್ಞಾನ

ಕೇಂದ್ರದಿಂದ ರಾಜ್ಯಗಳಿಗೆ ಮಹತ್ವದ ಸುತ್ತೋಲೆ ; ಸರ್ಕಾರಿ ಸವಲತ್ತುಗಳು ಹಾಗೂ ಸಬ್ಸಿಡಿಯನ್ನು ಪಡೆಯಲು ಆಧಾರ್ ಕಡ್ಡಾಯ!

UIDAI ಒಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಇತ್ತೀಚಿನ ಸುತ್ತೋಲೆಯಂತೆ ಇನ್ನು ಮುಂದೆ ಸರ್ಕಾರಿ ಸಬ್ಸಿಡಿಗಳು(Subsidy) ಮತ್ತು ಪ್ರಯೋಜನಗಳನ್ನು ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ!

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.