Bengaluru: ಕರ್ನಾಟಕ ರಾಜ್ಯದಲ್ಲಿ ನಾಯಿ ಕಡಿತ (Dog bite) ಹಾಗೂ ರೇಬಿಸ್ ಪ್ರಕರಣಗಳು (Rabies cases) ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಯ (Department of Health) ಅಂಕಿ ಅಂಶಗಳಿಂದ ತಿಳಿದುಬಂದಿದ್ದು, (Rabies cases increase) ಕಳೆದ ಎರಡು ತಿಂಗಳುಗಳಲ್ಲಿ ರೇಬಿಸ್ ಸೋಂಕಿನಿಂದ (Rabies infection) ಎಂಟು ಮಂದಿ ಮೃತಪಟ್ಟಿದ್ದಾರೆ.
ರೇಬಿಸ್ ಸೋಂಕಿನಿಂದ ಮೃತಪಟ್ಟ ನಾಲ್ಕು ಪ್ರಕರಣಗಳ ಪೈಕಿ ಮೂರು ಬೆಂಗಳೂರಿನಲ್ಲಿ ಸಂಭವಿಸಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಹರಿಯಾಣ (Haryana), ಚಿತ್ರದುರ್ಗ ಹಾಗೂ ತುಮಕೂರು ಮೂಲದ ವ್ಯಕ್ತಿಗಳು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದ (Swami Vivekananda Road Metro Station) ಸಮೀಪದ ಆಸ್ಪತ್ರೆಯೊಂದರಲ್ಲಿ ಶಂಕಿತ ರೇಬಿಸ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ನಿಗದಿಪಡಿಸಿರುವ ಆಸ್ಪತ್ರೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಇನ್ನೊಂದು ಸಾವು ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಆಸ್ಪತ್ರೆಯಲ್ಲಿ (Indira Gandhi Institute of Child Health Hospital) ಸಂಭವಿಸಿದೆ.

ಅಲ್ಲಿ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. 2025ರ ಫೆಬ್ರವರಿ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ (Karnataka) ಒಟ್ಟು 66489 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ವಿಜಯಪುರದಲ್ಲಿ 4,552 ಮತ್ತು ಬೆಂಗಳೂರಿನಲ್ಲಿ 4072, ಹಾಸನದಲ್ಲಿ 3688 ಪ್ರಕರಣಗಳು ವರದಿಯಾಗಿವೆ.
ಇದನ್ನು ಓದಿ:ಕೋವಿಡ್ ಸಮಯದಲ್ಲಿ ಸ್ಟೀರಾಯ್ಡ್ ಬಳಕೆ! ವಯಸ್ಕರಲ್ಲಿ ಹೆಚ್ಚಾಯ್ತು ಆರೋಗ್ಯ ಸಮಸ್ಯೆ!
ಇನ್ನು ನಾಯಿ ಕಡಿತ ಮತ್ತು ರೇಬಿಸ್ ಪ್ರಕರಣಗಳ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡ 47ರಷ್ಟು ಹೆಚ್ಚಾದಂತಾಗಿದೆ. 2024ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಕರ್ನಾಟಕದಲ್ಲಿ 3,61,522 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದರೆ, 42 ಮಂದಿ ಮೃತಪಟ್ಟಿದ್ದರು.ಪ್ರತಿಯೊಂದು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು (Private and Govt Hospitals) ನಾಯಿ ಕಡಿತ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುತ್ತವೆ.(Rabies cases increase) ಎಲ್ಲಾ ನಾಯಿ ಕಡಿತ ಪ್ರಕರಣಗಳು ರೇಬೀಸ್ ಪ್ರಕರಣಗಳಾಗಿರುವುದಿಲ್ಲ.
ಆದರೂ, ನಾಯಿ ಕಚ್ಚಿದ ಸಂದರ್ಭದಲ್ಲಿ ಗಾಯವನ್ನು ನೀರು ಮತ್ತು ಸಾಬೂನಿನಿಂದ ತೊಳೆದು ಶುಚಿಗೊಳಿಸವುದು ಮುಖ್ಯವಾಗಿದೆ. ಇದು ಸೋಂಕಿನ ಹರಡುವಿಕೆ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಎಂದು ಇಂಟಿಗ್ರೇಟೆಡ್ ಡಿಸೀಸ್ ಸರ್ವೈಲೆನ್ಸ್ ಪ್ರೋಗ್ರಾಂ ಯೋಜನಾ (Integrated Disease Surveillance Program Planning) ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ತಿಳಿಸಿದ್ದಾರೆ. ಹಾಗಾಗಿ ಪ್ರಾಣಿಗಳ ವ್ಯಾಕ್ಸಿನೇಷನ್ (Vaccination of animals) ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಇನ್ನಷ್ಟು ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.