ಅಮೇಥಿ, ರಾಯ್ ಬರೇಲಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ

Uttar Pradesh: ಗಾಂಧಿ ಕುಟುಂಬದ ಭದ್ರಕೋಟೆಗಳು ಎಂದೇ ಖ್ಯಾತಿ ಗಳಿಸಿರುವ ಉತ್ತರ ಪ್ರದೇಶದ (Rae Bareli Lok Sabha Update) ಅಮೇಥಿ ಹಾಗೂ ರಾಯ್ಬರೇಲಿ ಲೋಕಸಭಾ

ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಇದೀಗ ಗಾಂಧಿ ಕುಟುಂಬ ತೀವ್ರ ನಿರಾಸಕ್ತಿ ತಳೆದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಸ್ಮೃತಿ ಇರಾನಿ

(Smruthi Irani) ವಿರುದ್ದ ಸೋಲನ್ನುಂಡಿದ್ದರು. ಆದರೆ ಸೋನಿಯಾ ಗಾಂಧಿ (Sonia Gandhi) ಅವರು ರಾಯ್ಬರೇಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ಇನ್ನು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ್ದಿದ್ದು, ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಸೋನಿಯಾ

ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ರಾಯ್ಬರೇಲಿ (Rae Bareli) ಕ್ಷೇತ್ರದಿಂದ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧೆ ಮಾಡುತ್ತಾರೆ ಎಂದು ಸುದ್ದಿ ಇತ್ತು. ಆದರೆ ಪ್ರಿಯಾಂಕಾ ವಾದ್ರಾ (Priyanka

Vadra) ಅವರು ಕೂಡಾ ಈ ಕ್ಷೇತ್ರದಿಂದ ಸ್ಪರ್ಧಿಸಲು (Rae Bareli Lok Sabha Update) ನಿರಾಸಕ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್ ಗಾಂಧಿ (Rahul Gandhi) ಅವರು ಕೂಡಾ ಸಿದ್ದರಿಲ್ಲ. ಅವರು ಈ ಬಾರಿಯೂ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದಲೇ

ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿರುವ 17 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಗಿದೆ. ಆದರೆ ರಾಯ್ಬರೇಲಿ ಹಾಗೂ

ಅಮೇಥಿ ಲೋಕಸಭಾ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ.

ಆದರೆ ಯಾವುದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ. ಈ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಗಾಂಧಿ ಕುಟುಂಬದಿಂದ ಯಾರೂ ಮುಂದೆ ಬಂದಿಲ್ಲ. ಎರಡೂ ಕ್ಷೇತ್ರಗಳಲ್ಲಿ 3 ಬಾರಿ

ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯ ಪ್ರಕಾರ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ದುರ್ಬಲವಾಗಿದೆ ಎಂಬ ಅಂಶ ಹೊರಬಿದ್ದಿದೆ. ಗೆಲುವು ಕಷ್ಟವಾಗಲಿದೆ ಎಂಬುದು ಸ್ಥಳೀಯ ನಾಯಕರ ಅಭಿಪ್ರಾಯ.

ಹೀಗಾಗಿಯೇ ಗಾಂಧಿ ಕುಟುಂಬ ಈ ಕ್ಷೇತ್ರಗಳಿಂದ ದೂರ ಸರಿಯುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಇನ್ನು ಗಾಂಧಿ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸದಿದ್ದರೆ ಅದು ಕಾಂಗ್ರೆಸ್ ಕಾರ್ಯಕರ್ತರ

ನೈತಿಕತೆಯ ಮೇಲೆ ಗಂಭೀರ ಪರಿಣಾಮ ಬೀರುವುದು ಖಚಿತ.

ಇದನ್ನು ಓದಿ: ಅಪ್ಪನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಹೀಗೆ: ಯತೀಂದ್ರ ವಿರುದ್ದ ಸಿ.ಟಿ.ರವಿ ಕಿಡಿ

Exit mobile version