ಭಾರತ ತಂಡದ ಕೋಚ್‌ ಹುದ್ದಗೆ ಅರ್ಜಿ ಸಲ್ಲಿಸಿದ ಕ್ರಿಕೆಟ್‌ ದಿಗ್ಗಜ

ಮುಂಬೈ ಅ 27 : ನಿರೀಕ್ಷೆಯಂತೆಯೇ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ದ್ರಾವಿಡ್ ಮತ್ತಷ್ಟು ಹತ್ತಿರವಾಗಿದ್ದಾರೆ. ಬಿಸಿಸಿಐ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಆಯ್ಕೆಗೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳನ್ನು ನಡೆಸಲಿದೆ. ಸ್ವತಃ ಬಿಸಿಸಿಐ ದ್ರಾವಿಡ್ ಅವರನ್ನು ಮನವೊಲಿಸಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕಾರಣವಾಗಿರುವ ಹಿನ್ನೆಲೆಯಲ್ಲಿ ದ್ರಾವಿಡ್ ಆಯ್ಕೆಯಲ್ಲಿ ಯಾವುದೇ ಅನುಮಾನಗಳು ಇಲ್ಲ. ಎನ್‌ಸಿಎ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಕೋಚ್ ಹುದ್ದೆಯ ಮೇಲೆ ಆಸಕ್ತಿಯನ್ನು ಹೊಂದಿರಲಿಲ್ಲ. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದ್ರಾವಿಡ್ ಮನವೊಲಿಸುವಲ್ಲಿ ಯಶಸ್ವುಯಾಗಿದ್ದು ಮುಂದಿನ ಪ್ರಕ್ರಿಯೆಗಳೂ ಶೀಘ್ರವಾಗಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ.

ಎನ್‌ಸಿಎ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸಿದ ವಿವಿಎಸ್‌ ಲಕ್ಷಣ್‌

ದ್ರಾವಿಡ್ ಸದ್ಯ ಹೊಂದಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯ ಮುಖ್ಯಸ್ಥ ಹುದ್ದೆ ಕೂಡ ಟೀಮ್ ಇಂಡಿಯಾದ ದಿಗ್ಗಜ ಟೆಸ್ಟ್ ಆಟಗಾರನ ಆಟಗಾರನ ಪಾಲಾಗುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಈ ಹುದ್ದೆ ಅಲಂಕರಿಸುವ ಸಾಧ್ಯತೆಯಿದೆ. ಈ ಬಗ್ಗೆ ಈ ಹಿಂದೆ ಕೂಡ ವರದಿಗಳಾಗುತ್ತು. ಆದರೆ ಲಕ್ಷ್ಮಣ್ ಈ ಜವಾಬ್ಧಾರಿ ವಹಿಸಿಕೊಳ್ಳಲು ನಿರಾಕರಿಸಿದ್ದರು ಎನ್ನಲಾಗಿದೆ. ಆದರೆ ಈಗ ನಡೆದಿರುವ ಬೆಳವಣಿಗೆಯ ಪ್ರಕಾರ ಲಕ್ಷ್ಮಣ್ ಈ ಹುದ್ದೆಗೇರುವ ಸ್ಪರ್ಧೆಯಲ್ಲಿ ಮುಂದಿದ್ದಾರೆ ಎನ್ನಲಾಗಿದೆ. ಎಎನ್‌ಐ ಸುದ್ದಿ ಸಂಸ್ಥೆ ಈ ಬಗ್ಗೆ ಮೂಲಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. “ಹೌದು, ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇನ್ನು ದ್ರಾವಿಡ್ ಅವರಿಂದ ಎನ್‌ಸಿಎ ಮುಖ್ಯಸ್ಥ ಹುದ್ದೆಯನ್ನು ವಹಿಸಿಕೊಳ್ಳುವ ರೇಸ್‌ನಲ್ಲಿ ಖಂಡಿತವಾಗಿಯೂ ವಿವಿಎಸ್ ಲಕ್ಷ್ಮಣ್ ಇದ್ದಾರೆ” ಎಂದು ಬಿಸಿಸಿಐ ಮೂಲಗಳು ಮಾಹಿತಿಯನ್ನು ನೀಡಿದೆ.

Exit mobile version