Visit Channel

ಶ್ರೀಲಂಕಾ ಪ್ರವಾಸಕ್ಕೆ ತೆರಳುವ ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್

WhatsApp Image 2021-05-20 at 1.42.54 PM

ಹೊಸದಿಲ್ಲಿ, ಮೇ. 20: ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್, ಮುಂದಿನ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ನಡೆಯುವ ವೈಟ್-ಬಾಲ್ ಪಂದ್ಯಗಳಿಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ರಾಹುಲ್‌ ದ್ರಾವಿಡ್ ಅವರಿಗೆ ಭಾರತದ ಹಿರಿಯರ ಕ್ರಿಕೆಟ್ ತಂಡದೊಂದಿಗೆ ಇದು ಅವರ ಎರಡನೇ ಪ್ರಮುಖ ಕಾರ್ಯವಾಗಿದೆ. ಈ ಹಿಂದೆ ಅವರು 2014ರಲ್ಲಿ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ಕೆಲಸ ಮಾಡಿದ್ದರು.

ರಾಹುಲ್ ದ್ರಾವಿಡ್ ಈಗಾಗಲೇ ಭಾರತ ‘ಎ’ ತಂಡದ ಬಹುತೇಕ ಹುಡುಗರೊಂದಿಗೆ ಕೆಲಸ ಮಾಡಿರುವುದರಿಂದ ಅವರು ಮಾರ್ಗದರ್ಶನ ನೀಡುವುದು ಉತ್ತಮ. ಯುವ ಆಟಗಾರರು ಅವರೊಂದಿಗೆ ಮುಕ್ತವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು.

ಎನ್.ಸಿ.ಎ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ರಾಹುಲ್ ದ್ರಾವಿಡ್, 2019ರಲ್ಲಿ ಭಾರತದ ಅಂಡರ್ -19 ಹಾಗೂ ಭಾರತ ‘ಎ’ ರಾಷ್ಟ್ರೀಯ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಭಾರತದ ಎರಡನೇ ತಂಡವು ಮೂರು ಏಕದಿನ ಪಂದ್ಯಗಳಿಗೆ ಶ್ರೀಲಂಕಾ ಪ್ರವಾಸ ಮಾಡುತ್ತಿದೆ. ಶ್ರೀಲಂಕಾ ಸರಣಿಗೆ ಈ ತಿಂಗಳ ಕೊನೆಯಲ್ಲಿ ತಂಡದ ಆಯ್ಕೆ ನಡೆಯಲಿದ್ದು, ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡದ ಆಟಗಾರರು, ದ್ವೀಪ ರಾಷ್ಟ್ರದಲ್ಲಿ ಸೀಮಿತ ಓವರ್ಗಳು ಪಂದ್ಯವನ್ನು ಸಹ ಆಡಲಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.