ಭ್ರಷ್ಟ ಉದ್ಯಮಿಗಳಿಗೆ ಭಾರತದಲ್ಲಿ ಜಾಗ ನೀಡಿದ್ದೇ ಮೋದಿ ಸರ್ಕಾರ: ರಾಹುಲ್ ಗಾಂಧಿ

Ghaziabad : ಭಾರತದಲ್ಲಿ ಭ್ರಷ್ಟ ಉದ್ಯಮಿಗಳ ಸಾಲ ಮನ್ನಾ ಮಾಡಿದ ಪ್ರಧಾನಿ ಮೋದಿ (Rahul Gandhi Against Modi Govt) ಅವರ ರಕ್ಷಣೆಗೆ ನಿಂತಿದ್ದಾರೆ. ದೇಶದಲ್ಲಿ ಎಷ್ಟೋ ಸಮಸ್ಯೆಗಳಿದ್ದರೂ

ಜನರ ದೃಷ್ಟಿಯನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಮೋದಿ ಮಾಡುತ್ತಿದ್ದಾರೆ .ಭ್ರಷ್ಟಾಚಾರದ ಚಾಂಪಿಯನ್ ಮೋದಿ ಆಗಿದ್ದು, ಚುನಾವಣಾ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ ಸುಲಿಗೆ ಯೋಜನೆಯಾಗಿದೆ

ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ,

ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಜನರ ಒಲವು ಇದೆ ಮತ್ತು ಬಿಜೆಪಿ (BJP) 150 ಸ್ಥಾನಗಳಿಗೆ ತೃಪ್ತಿಪಡೆಯಬೇಕಾಗುತ್ತದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ

ಬಾರಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ ಅದೇ ಅವರಿಗೆ ಹಿನ್ನೆಡೆ ಉಂಟಾಗಲು ಕಾರಣವಾಗುತ್ತದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ (Congress) ಒಂದೇ ಬಾರಿಗೆ ಬಡತನವನ್ನು ಕೊನೆಗೊಳಿಸುತ್ತದೆ ಎಂಬ ಮೋದಿಯವರ ಟೀಕೆಗಳ ಕುರಿತು ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿದ್ದು, ಬಡತನವು ಒಂದೇ ಬಾರಿಗೆ ಕೊನೆಗೊಳ್ಳುತ್ತದೆ

ಎಂದು ಯಾರೂ ಹೇಳಲಿಲ್ಲ ಆದರೆ ನಾವು ಅದಕ್ಕಾಗಿ ಬಲವಾದ (Rahul Gandhi Against Modi Govt) ಪ್ರಯತ್ನಗಳನ್ನು ಮಾಡುತ್ತ ಬಂದಿದ್ದೇವೆ.

ಆದರೆ ಮೋದಿ ಸರ್ಕಾರ ದೇಶದ 20 ರಿಂದ 25 ಶ್ರೀಮಂತ ಉದ್ಯಮಿದಾರರಿಗೆ 16 ಲಕ್ಷ ಕೋಟಿ ರು ಸಾಲ ನೀಡಿದ್ದಾರೆ. ಆದರೆ ಬಡವರ ಸಮಸ್ಯೆ, ರೈತರ ಸಮಸ್ಯೆ, ನಿರುದ್ಯೋಗಿಗಳ ಸಮಸ್ಯೆ ಕುರಿತು ಅವರು

ಎಂದೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದ ಅವರು, ದೇಶದಲ್ಲಿ ಎಷ್ಟೋ ಸಮಸ್ಯೆಗಳಿದ್ದರೂ ಜನರ ದೃಷ್ಟಿಯನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಮೋದಿ ಮಾಡುತ್ತಿದ್ದಾರೆ ಎಂದು ಮೋದಿ ಸರ್ಕಾರದ

ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಂದೆಡೆ, ಆರೆಸ್ಸೆಸ್‌ (RSS) ಮತ್ತು ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ, ಇಂಡಿಯಾ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಗಳು ಸಂವಿಧಾನ

ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ ಜನರ ಏಳ್ಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ

ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ತಮ್ಮ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ದಾವಣಗೆರೆಯಲ್ಲಿ ಕೈ ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ʼಕುರುಬಾಸ್ತ್ರʼ ; ಕೈ ಕಂಗಾಲು..?!

Exit mobile version