ನೈಟ್‌ಕ್ಲಬ್‌ಗೆ ರಾಹುಲ್ ಗಾಂಧಿ ಹೋಗಿದ್ದರಲ್ಲಿ ಏನು ತಪ್ಪಿದೆ? : ಕಾಂಗ್ರೆಸ್!

rahul gandhi

ನೇಪಾಳದ ಕಠ್ಮಂಡುವಿನ ನೈಟ್‌ಕ್ಲಬ್‌ನಲ್ಲಿ ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ(Rahul Gandhi) ಪಾರ್ಟಿ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ(BJP) ವಿವಾದವನ್ನು ಹುಟ್ಟುಹಾಕಿತು.

ಈ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ, ರಾಹುಲ್ ಗಾಂಧಿ ಪಾರ್ಟಿಗೆ ಹೋಗಿದ್ದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸುವ ಮೂಲಕ ತನ್ನ ಉನ್ನತ ನಾಯಕನನ್ನು ಸಮರ್ಥಿಸಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಈ ವೈರಲ್ ವೀಡಿಯೋ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ರಾಹುಲ್ ಗಾಂಧಿ ಅವರು ಕಠ್ಮಂಡುವಿನಲ್ಲಿ ಸ್ನೇಹಿತನ ಮದುವೆಯಲ್ಲಿ ಭಾಗವಹಿಸಿದ್ದಾರೆ ಅಷ್ಟೇ. ವಿನಾಕಾರಣ ಕಾಂಗ್ರೆಸ್ ನಾಯಕರ ಹಿಂದೆ ಹೋಗುವ ಬದಲು ಆಮದು ವಿಚಾರಗಳತ್ತ ಗಮನ ಹರಿಸುವಂತೆ ಬಿಜೆಪಿಗೆ ಕಟುವಾಗಿ ಪರೋಕ್ಷ ಸಲಹೆ ನೀಡಿದರು.

ರಾಹುಲ್ ಗಾಂಧಿ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಬಂದಿದ್ದಾರೆ. ಅವರು ಅಲ್ಲಿಗೆ ವೈಯಕ್ತಿಕ ಭೇಟಿ ನೀಡಿದರು. ಬಿಜೆಪಿಯವರು ದೇಶದಲ್ಲಿ ವಿದ್ಯುತ್ ಬಿಕ್ಕಟ್ಟು, ಹಣದುಬ್ಬರಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸದೇ, ರಾಹುಲ್ ಗಾಂಧಿ ಅಲ್ಲಿ ಯಾಕೆ ಹೋದ್ರು? ಇಲ್ಲಿ ಯಾಕೆ ಬಂದ್ರು ಎಂಬ ಬೇಡದ ಪ್ರಶ್ನೆಗಳನ್ನು ಯಾಕೆ ಕೇಳುತ್ತರೋ ತಿಳಿಯದು ಎಂದು ಸುರ್ಜೆವಾಲಾ ಹೇಳಿದರು.

ಮದುವೆ ಮತ್ತು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸುವುದು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ವಿಷಯವಾಗಿದೆ. ಮದುವೆಯಾಗುವುದು, ಯಾರೊಂದಿಗಾದರೂ ಸ್ನೇಹಿತರಾಗುವುದು ಅಥವಾ ಅವರ ಮದುವೆಯಲ್ಲಿ ಪಾಲ್ಗೊಳ್ಳುವುದು ಈ ದೇಶದಲ್ಲಿ ಇನ್ನೂ ಅಪರಾಧವಾಗಿಲ್ಲ. ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ, ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಹೋದಂತೆ ರಾಹುಲ್ ಗಾಂಧಿ ಆಹ್ವಾನಿಸದ ಅತಿಥಿಯಾಗಿ ಹೋಗಿಲ್ಲ.

ಸ್ನೇಹಿತನ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಅವರು ಸ್ನೇಹ ದೇಶವಾದ ನೇಪಾಳಕ್ಕೆ ತೆರಳಿದ್ದರು. ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಕೇಸರಿ ಪಕ್ಷವು ಸುಳ್ಳುಗಳನ್ನು ಹರಡುತ್ತಿದೆ ಎಂದು ಆರೋಪಿಸಿದರು ಮತ್ತು ಸಾಮಾನ್ಯ ವ್ಯಕ್ತಿಯಂತೆ ಖಾಸಗಿ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಿದ ಗಾಂಧಿಯ ಕುಟುಂಬದಲ್ಲಿ ಅಂಥದ್ದೇನು ತಪ್ಪಾಗಿದೆ ಎಂದು ಪ್ರಶ್ನಿಸಿದರು!

Exit mobile version