ಮೋದಿ ಭಾಷಣ ಕೇಳಿದ್ರೆ ಜನ ನಗ್ತಾರೆ : ರಾಹುಲ್ ಗಾಂಧಿ!

political

ಪ್ರಧಾನಿ(Primeminister) ನರೇಂದ್ರ ಮೋದಿಯವರು(Narendra Modi) ಕರ್ನಾಟಕಕ್ಕೆ ಬಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ರೆ, ಇಲ್ಲಿಯ ಜನ ನಗುತ್ತಾರೆ. ರಾಜ್ಯದಲ್ಲಿರುವ ಬಿಜೆಪಿ(BJP) ಸರ್ಕಾರ ೪೦% ಕಮೀಷನ್ ಸರ್ಕಾರ ಎಂದೇ ಖ್ಯಾತಿ ಪಡೆದಿದೆ. ಕರ್ನಾಟಕದ ಗುತ್ತಿಗೆದಾರರ ಸಂಘವು ಕೂಡ ಇದೇ ಮಾತನ್ನು ಹೇಳಿದೆ. ಬಿಜೆಪಿ ಸರ್ಕಾರದಲ್ಲಿ ಗುತ್ತಿಗೆಗೆ ೪೦% ಹಣವನ್ನು ನೀಡಬೇಕೆಂದು ಆರೋಪಿಸಿದ್ದರು ಎಂದು ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಇನ್ನು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ನಿಕಟಪೂರ್ವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ರಾಜ್ಯ ಕಾಂಗ್ರೆಸ್ ನಡೆಸಿದ ಸದಸ್ಯತ್ವ ಅಭಿಯಾನ ಕುರಿತು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಆನ್ ಲೈನ್ ಸಂವಾದ ನಡೆಸಿ ಮಾತನಾಡಿದ ಅವರು, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೫೦ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಬೇಕು. ಕಠಿಣ ಪರಿಶ್ರಮ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳನ್ನು ಗುರುತಿಸಿ ಈ ಬಾರಿ ಟಿಕೇಟ್ ನೀಡಲಾಗುತ್ತದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸಾಕಷ್ಟು ಸದೃಢವಾಗಿದೆ. ನಿಶ್ಚಿತ ಗುರಿಯೊಂದಿಗೆ ನಡೆದರೆ ೧೫೦ ಸ್ಥಾನಗಳನ್ನು ನಾವು ಗೆಲ್ಲಬಹುದು. ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತನು ಶ್ರಮಿಸಬೇಕು ಎಂದು ಕರೆ ನೀಡಿದರು. ಇನ್ನು ೬೦ ಲಕ್ಷ ಹೊಸ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಈ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬ ಕಾರ್ಯಕರ್ತನಿಗೂ, ನಾಯಕನಿಗೂ ನಾನು ಅಭಿನಂದಿಸುತ್ತೇನೆ. ಹೊಸ ಸದಸ್ಯರ ಪೈಕಿ ಹೆಚ್ಚಿನವರು ಯುವಕರಾಗಿದ್ದು, ಮುಂಬರುವ ಚುನಾವಣೆಯಲ್ಲಿ ಯುವಜನರು ಕಾಂಗ್ರೆಸ್ ಪಕ್ಷದೊಂದಿಗೆ ಹೆಜ್ಜೆ ಹಾಕಲಿದ್ದಾರೆ.

ಆದರೆ ಕಾಂಗ್ರೆಸ್ ನಲ್ಲಿ ನಾಯಕರು ಮತ್ತು ಕಾರ್ಯಕರ್ತರು ಎಲ್ಲ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೮೦ ಸ್ಥಾನಗಳನ್ನು ಬಿಜೆಪಿ ೧೦೪ ಸ್ಥಾನಗಳನ್ನು ಪಡೆದಿದ್ದರು. ೨೨೪ ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ೧೧೩ ಸ್ಥಾನಗಳನ್ನು ಗೆಲ್ಲಬೇಕಿದೆ. ೨೦೨೩ ರ ಮೇನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

Exit mobile version