ರಾಹುಲ್ ಗಾಂಧಿ ಕಚೇರಿ ಮೇಲೆ ಕೇರಳ ಆರೋಗ್ಯ ಸಚಿವರ ಸಿಬ್ಬಂದಿಯ ನೇತೃತ್ವದಲ್ಲಿ ದಾಳಿ : ಕಾಂಗ್ರೆಸ್

Telangana

ಕೇರಳದ(Kerala) ವಯನಾಡಿನ(Waynad) ಸಂಸದರಾಗಿರುವ ಕಾಂಗ್ರೆಸ್‍ನ(Congress) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಅವರ ವಯನಾಡಿನ ಕಲ್ಪೆಟ್ಟಾದಲ್ಲಿರುವ ಕಚೇರಿಯನ್ನು ಎಸ್‍ಎಫ್‍ಐ(SFI) ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ. ಕಚೇರಿಗೆ ನುಗ್ಗಿ ಕಟ್ಟಡದ ಬಾಗಿಲು, ಪಿಠೋಪಕರಣಗಳು, ಕಂಪ್ಯೂಟರ್ ಮತ್ತು ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ.

ಇನ್ನು ಪಶ್ಚಿಮ ಘಟ್ಟಗಳ(Western Ghats) ಭಾಗವಾಗಿರುವ ವಯನಾಡಿನಲ್ಲಿ ‘ಪರಿಸರ ಸೂಕ್ಷ್ಮ ವಲಯ’ದ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಸರ್ಕಾರ(Central Government) ವಯನಾಡನ್ನು ಘೋಷಣೆ ಮಾಡಿದರೆ, ಇಲ್ಲಿಯ ಕೃಷಿಕರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ಪರಿಸರ ಸೂಕ್ಷ್ಮ ವಲಯದ ವಿಚಾರದಲ್ಲಿ ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿ ಮಧ್ಯಪ್ರವೇಶಿಸದಿರುವುದರ ವಿರುದ್ದ ಎಸ್‍ಎಫ್‍ಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಈ ವೇಳೆ ಪ್ರತಿಭಟನಕಾರರು ರಾಹುಲ್ ಗಾಂಧಿ ಅವರ ಕಚೇರಿಗೆ ನುಗ್ಗಿ ಅನೇಕ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಎಸ್‍ಎಫ್‍ಐ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಅನೇಕರನ್ನು ವಶಕ್ಕೆ ಪಡೆದು, ಕಲ್ಪೆಟ್ಟಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಎಸ್‍ಎಫ್‍ಐ ಕಾರ್ಯಕರ್ತರ ಈ ದಾಳಿಯು ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಚೇರಿ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್, ಇದು ಕಾನೂನುಬಾಹಿರ ಮತ್ತು ಎಸ್‍ಎಫ್‍ಐ ಗೂಂಡಾಗಿರಿಯನ್ನು ತೋರಿಸುತ್ತದೆ. ಸಿಪಿಎಂ ಸಂಘಟಿತ ಗೂಂಡಾಗಿರಿ ಮಾಫಿಯಾವಾಗಿ ಮಾರ್ಪಟ್ಟಿದೆ. ನಮ್ಮ ಸಂಸದರ ಕಚೇರಿ ಮೇಲೆ ಎಸ್‍ಎಫ್‍ಐ ಗೂಂಡಾಗಳು ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತವೆ ಎಂದು ತಿಳಿಸಿದೆ.

Exit mobile version