ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುತ್ತಿರುವವರ ಜೊತೆಗೆ ನಾವೆಲ್ಲರೂ ನಿಲ್ಲಬೇಕು : ರಾಹುಲ್ ಗಾಂಧಿ

BJP

ಕರ್ನಾಟಕದಲ್ಲಿ(Karnataka) ಬಿಜೆಪಿ ಸರ್ಕಾರದ(BJP Government) ಭ್ರಷ್ಟಾಚಾರವನ್ನು(Corruption) ಬಯಲಿಗೆಳೆದ ಹೈಕೋರ್ಟ್(Highcourt) ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಲಾಗಿದೆ. ಒಂದರ ಮೇಲೊಂದು ಸಂಸ್ಥೆಗಳ ಮೇಲೆ ಬಿಜೆಪಿ ಬುಲ್ಡೋಜರ್ ಮಾಡುತ್ತಿದೆ. ನಿರ್ಭೀತಿಯಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವವರ ಜೊತೆಗೆ ನಾವೆಲ್ಲರೂ ನಿಲ್ಲಬೇಕು ಎಂದು ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಟ್ವೀಟ್ ಮೂಲಕ ಕರೆ ನೀಡಿದ್ದಾರೆ.


ಇನ್ನು ಪಿಎಸ್ಐ ಅಕ್ರಮದ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ(State Congress President) ಡಿ.ಕೆ.ಶಿವಕುಮಾರ್(DK Shivkumar), ಪಿಎಸ್ಐ ನೇಮಕಾತಿ ಅಕ್ರಮಗಳಿಗೆ ಸರ್ಕಾರವೇ ಹೊಣೆ. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ(Resignation) ಕೊಡಬೇಕು. ಅಕ್ರಮವೇ ನಡೆದಿಲ್ಲ ಎಂದು ಸದನದಲ್ಲಿ ಸುಳ್ಳು ಹೇಳಿದ ಗೃಹ ಸಚಿವರ ಮೇಲೂ ಪ್ರಕರಣ ದಾಖಲಿಸಬೇಕು. ಇದು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ. ಈ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರು ರಾಜ್ಯದ ಗೌರವ ಕಾಪಾಡಬೇಕು.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅವರ ಬಂಧನ ಕೇವಲ ನ್ಯಾಯಾಂಗ ಹಾಗೂ ಜನರ ಕಣ್ಣೊರೆಸುವ ತಂತ್ರ. ಈ ಪ್ರಕರಣದಲ್ಲಿ 300 ರಿಂದ 500 ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ. ಇದೆಲ್ಲದರ ಸಂಪೂರ್ಣ ವಿಚಾರಣೆ ಮಾಡದೇ ಅವರನ್ನು ನೆಪಮಾತ್ರಕ್ಕೆ ಬಂಧಿಸಿ ವಿಚಾರಣೆ ಮುಕ್ತಾಯಗೊಳಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ ಬೆಳವಣಿಗೆಗಳಿಂದ ರಾಜ್ಯದ ಆಡಳಿತ ಹಾಗೂ ಘನತೆಗೆ ಮಸಿ ಬಳಿದಂತಾಗಿದೆ. ರಾಜ್ಯದಲ್ಲಿ ನ್ಯಾಯಾಂಗಕ್ಕೂ ರಕ್ಷಣೆ ಇಲ್ಲದಂತಾಗಿದೆ. ನ್ಯಾಯಮೂರ್ತಿಗಳೇ ಈ ಬಗ್ಗೆ ದುಗುಡ ವ್ಯಕ್ತಪಡಿಸಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಏನು ಬಯಸಿದೆ ಎಂಬುದು ದಾಖಲೆಗಳಿಂದ ಜಗಜ್ಜಾಹೀರಾಗಿದೆ ಎಂದಿದ್ದಾರೆ. ಇನ್ನು ಪಿಎಸ್ಐ ನೇಮಕಾತಿ ಅಕ್ರಮ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ದ ತೀವ್ರ ವಾಗ್ದಾಳಿ ನಡೆಸುತ್ತಿವೆ.

Exit mobile version