ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಬಳಿ ಕ್ಷಮೆ ಕೇಳಬೇಕು : ರಾಹುಲ್ ಗಾಂಧಿ!

Congress

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ‘ಮಾಫಿವೀರ್’ ಆಗಿ ದೇಶದಲ್ಲಿರುವ ಯುವಕರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ(Central Government) ಜಾರಿಗೆ ತಂದಿರುವ ‘ಅಗ್ನಿಪಥ್’ ಯೋಜನೆಯನ್ನು(Agnipath Yojana) ದೇಶದ ಯುವಜನತೆ ತಿರಸ್ಕರಿಸಿದ್ದಾರೆ. ಈ ಯೋಜನೆ ವಿರುದ್ದ ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ಹೊಸ ಸೇನಾ ನೇಮಕಾತಿ ನೀತಿಯಿಂದ ಯುವಕರಿಗೆ ಅವರ ಭವಿಷ್ಯದ ಬಗ್ಗೆ ಅಭದ್ರತೆ ಕಾಡುತ್ತಿದೆ. ಹೀಗಾಗಿ ಅವರು ಬೀದಿಗಿಳಿದಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಮೋದಿ ಸರ್ಕಾರ ‘ಜೈ ಜವಾನ್ ಜೈ ಕಿಸಾನ್’ ಮೌಲ್ಯಗಳಿಗೆ ಅಪಮಾನ ಮಾಡಿದೆ. ಈ ಹಿಂದೆ ಮೋದಿ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದೆ. ಸಾಕಷ್ಟು ಹೋರಾಟದ ಬಳಿಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಯಿತು. ಇದೀಗ ‘ಅಗ್ನಿಪಥ್’ ಯೋಜನೆಯನ್ನು ವಿರೋಧಿಸಿ ದೇಶದ ಯುವಕರು ಬೀದಿಗೆ ಇಳಿದಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದಿದ್ದಾರೆ.

ಇನ್ನು ‘ಅಗ್ನಿಪಥ್’ ಯೋಜನೆ ವಿರೋಧಿಸಿ ದೇಶಾದ್ಯಂತ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ ಸೃಷ್ಟಿಸಲಾಗಿದೆ. ಈ ನಡುವೆ ಕೇಂದ್ರ ಸರ್ಕಾರ ನೂತನ ಯೋಜನೆಯನ್ನು ಸಮರ್ಥಿಸಿಕೊಂಡಿದೆ.

Exit mobile version