ಟ್ವಿಟರ್ ವಿರುದ್ದವೇ ಆರೋಪ ಮಾಡಿದ ರಾಹುಲ್ ಗಾಂಧಿ.!

ನವದೆಹಲಿ ಜ 27 : ಟ್ವಿಟರ್ ವಿರುದ್ದವೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗಿಬಿದ್ದಿದ್ದು. ಟ್ವಿಟರ್ ಖಾತೆಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರದ ಒತ್ತಡಕ್ಕೆ ಮಣಿದು ತಮ್ಮ ಧ್ವನಿಯನ್ನು ಅಡಗಿಸುವ ಸಲುವಾಗಿ ತಮ್ಮ ಟ್ವಿಟರ್ ಫಾಲೋವರ್ಸ್ ಮೇಲೆ ಅಘೋಷಿತ ನಿರ್ಬಂಧ ಹೇರಲಾಗುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯನ್ನು ಹತ್ತಿಕ್ಕಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡಿಸೆಂಬರ್ ನಲ್ಲಿ ಟೈಟರ್ ಸಿಇಒ ಪರಾಗ್ ಅಗರ್ವಾಲ್ ಗೆ ಬರೆದಿರುವುದಾಗಿ ತಿಳಿಸಿದ್ದಾರೆ. ಪತ್ರದಲ್ಲಿ, “ಭಾರತದಲ್ಲಿ ಮುಕ್ತ ಮತ್ತು ನ್ಯಾಯಯುತ ಭಾಷಣ ತಡೆಯುವಲ್ಲಿ ಟ್ವಿಟರ್ ಪಾತ್ರವಿದೆ ಎಂದು ನಾನು ಭಾವಿಸುತ್ತೇನೆ. ಈ ಅಂಶವನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ನನ್ನ ಧ್ವನಿಯನ್ನು ಹತ್ತಿಕ್ಕಲು ಸರ್ಕಾರದಿಂದ ಟ್ವಿಟರ್ ಇಂಡಿಯಾ ಮೇಲೆ ಸಾಕಷ್ಟು ಒತ್ತಡವಿದೆ ಎಂದು ಜನರು ನನಗೆ ಹೇಳಿದ್ದಾರೆ ಎಂದಿದ್ದಾರೆ.


ರಾಹುಲ್ ಗಾಂಧಿಗೆ ಸೂಕ್ತ ಉತ್ತರ ನೀಡಿದ ಟ್ವಿಟರ್ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಟ್ವಿಟ್ಟರ್ ಅಡ್ಡಿ ಮಾಡುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ದೂರಿಗೆ ಟ್ವಿಟರ್ ವಕ್ತಾರರು ಪ್ರತಿಕ್ರಿಯೆ ನೀಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿಲ್ಲ, ಟ್ವಿಟರ್ ನ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿಗೆ ಉತ್ತರ ನೀಡಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಟ್ವಿಟರ್ ತನ್ನ ಹಿಂಬಾಲಕರ ಸಂಖ್ಯೆಯನ್ನು ಕಡಿಮೆ ಮಾಡಲು ಮುಂದಾಗುತ್ತಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಕಳೆದ ಡಿಸೆಂಬರ್ ನಲ್ಲಿ ಟ್ವಿಟರ್ ಸಿಇಒ ಗೆ ದೂರಿನ ಪತ್ರವನ್ನು ನೀಡಿದ್ದರು. ಇದೀಗ ಅವರ ಪ್ರಶ್ನೆಗಳಿಗೆ ಉತ್ತರ ದೊರಕಿದಂತಾಗಿದೆ.

Exit mobile version