Lucknow (Uttar Pradesh): ಮಹತ್ವದ ಬೆಳವಣಿಗೆಯಲ್ಲಿ ಉತ್ತರಪ್ರದೇಶದ ರಾಯ್ ಬರೇಲಿ (RahulGandhi contesting from RaiBareli) ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್
ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅಚ್ಚರಿ ಎಂದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಈ ಹಿಂದಿನ ಅಮೇಥಿ ಲೋಕಸಭಾ ಕ್ಷೇತ್ರದಿಂದ ದೂರಸರಿದು, ಸೋನಿಯಾ ಗಾಂಧಿ ಅವರು ಸ್ಪರ್ಧೆ
ಮಾಡುತ್ತಿದ್ದ ರಾಯ್ ಬರೇಲಿಯಿಂದ (RahulGandhi contesting from RaiBareli) ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಯ್ ಬರೇಲಿಯಿಂದ ಕಣಕ್ಕಿಳಿದರೆ, ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಬಿಜೆಪಿ ನಾಯಕ ಸ್ಮೃತಿ ಇರಾನಿ (Smriti Irani) ವಿರುದ್ದ ಕಣಕ್ಕಿಳಿಸುವುದಾಗಿ
ಘೋಷಣೆ ಮಾಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ವಿರುದ್ದ ಗೆಲುವು ಕಂಡಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ
ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ವಯನಾಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದ್ದರು. ಆದರೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ದ ಸೋಲುಂಡಿದ್ದರು. ಆದರೆ ವಯನಾಡಿನಲ್ಲಿ
ಗೆಲುವು ಸಾಧಿಸಿದ್ದರು. ಇನ್ನು ಈ ಬಾರಿಯೂ ರಾಹುಲ್ ಗಾಂಧಿ ಅವರು ವಯನಾಡಿನಿಂದ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಅಲ್ಲಿ ಮತದಾನ ಮುಗಿದಿದ್ದು, ಇದೀಗ ಎರಡನೇಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ
ಘೋಷಣೆ ಮಾಡಲಾಗಿದೆ.
5ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 2 ಕೊನೆಯ ದಿನವಾಗಿದೆ. ಹೀಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ
ಸೋನಿಯಾ ಗಾಂಧಿ (Soniya Gandhi) ಅವರ ವಿರುದ್ದ ಸೋಲು ಕಂಡಿದ್ದ, ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ರಾಯ್ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ. ನೆಹರೂ (Neharu) ಕುಟುಂಬದ ಭದ್ರಕೋಟೆಯಾಗಿದ್ದ
ಎರಡು ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸದಸ್ಯರಾದ ನಂತರ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ (Priyanka Vadra)
ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿಡಿತ್ತು. ತದನಂತರ ರಾಬರ್ಟ್ ವಾದ್ರಾ (Rabert Vadra) ಸ್ಪರ್ಧೆ ಮಾಡುತ್ತಾರೆ ಎಂದು ಸುದ್ದಿಯೂ ಹರಡಿತ್ತು. ಆದರೆ ಅಂತಿಮವಾಗಿ ರಾಹುಲ್ ಗಾಂಧಿ ಅವರೇ ಅಮ್ಮನ
ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ.
ಇದನ್ನು ಓದಿ: ಹ್ಯಾರಿಸ್ಗೆ ಬಿಡಿಎ, ಶಿವಲಿಂಗೇಗೌಡಗೆ ಗೃಹ ಮಂಡಳಿ ; 36 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ