ರಾಯಚೂರು(Raichur) ಜಿಲ್ಲೆಯಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಮೂವರು ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಕರ್ನಾಟಕ(Karnataka) ರಾಜ್ಯದ ಮುಖ್ಯಮಂತ್ರಿ(Chiefminister) ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸೋಮವಾರ ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಎಂಬಂತೆ ಪರಿಹಾರ(Compansation) ಘೋಷಿಸಿದ್ದಾರೆ.

ಮೂಲಗಳ ಪ್ರಕಾರ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿದಂತೆ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ”ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂರು ಸಾವು ಸಂಭವಿಸಿದ್ದು, ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. “ಕಾರಣಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಇಂಜಿನಿಯರ್ ಅವರನ್ನು ಕೇಳಿದ್ದೇನೆ, ಕೆಲವರು ಮಳೆಯಿಂದ ಪೈಪ್ಲೈನ್ ಹಾಳಾಗಿದೆ ಎಂದು ದೂರುತ್ತಿದ್ದಾರೆ. ನಾವು ತಾಂತ್ರಿಕ ವರದಿಯನ್ನು ಪಡೆಯುತ್ತಿದ್ದೇವೆ,” ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.
ರಾಯಚೂರು ನಗರದ ಎಲ್ಲಾ ವಾರ್ಡ್ಗಳ ಮಾದರಿಗಳನ್ನು ಪರೀಕ್ಷೆಗೊಳಪಡಿಸಿ ಕುಡಿಯುವ ನೀರಿನ ಸುರಕ್ಷತೆಯ ಬಗ್ಗೆ ದೃಢೀಕರಣ ಪತ್ರ ಪಡೆಯಲು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಇನ್ನು ಡಿವೈಎಸ್ಪಿ (ಪೊಲೀಸ್ ಉಪ ಅಧೀಕ್ಷಕರು) ನೇತೃತ್ವದ ತಂಡವು ತಾಂತ್ರಿಕ ಬೆಂಬಲವನ್ನು ಒಳಗೊಂಡಂತೆ ಅಧಿಕಾರಿಗಳ ಕಡೆಯಿಂದ ಯಾವುದೇ ಲೋಪದೋಷಗಳ ಬಗ್ಗೆ ಪೊಲೀಸ್ ವಿಚಾರಣೆ ನಡೆಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬೊಮ್ಮಾಯಿ ಅವರು ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಡಿ(CM Fund Relief) ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.