ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ : ೪೦ ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಶಾಂತ್ ಮಾಡಾಳ್

Bengaluru : ರಾಜ್ಯದಲ್ಲಿ ಮುಂಬರುತ್ತಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ (Prashant Madal) ತಮ್ಮ ಕಛೇರಿಯಲ್ಲಿ 40 ಲಕ್ಷ ಲಂಚ (raid on prashant madal) ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ!

ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ (Prashant Madal)ಬೆಂಗಳೂರಿನ ತಮ್ಮ ಕಛೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ

ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್‌(Red Hand) ಆಗಿ ಸಿಕ್ಕಿಬಿದ್ದಿರುವುದು ಇದೀಗ ಬಟಾಬಯಲಾಗಿದೆ.

ಬೆಂಗಳೂರಿನಲ್ಲಿರುವ ಖಾಸಗಿ ಕಚೇರಿಯಲ್ಲಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಜೆಪಿ ಶಾಸಕರ ಪುತ್ರನನ್ನು ಕರ್ನಾಟಕ ಸರ್ಕಾರದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ.

ಪ್ರಶಾಂತ್‌ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಪ್ರಶಾಂತ್‌ ಮಾಡಾಳ್

ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ(Soap and Detergent)ಅಧ್ಯಕ್ಷರು ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಬಿಜೆಪಿ(BJP) ಶಾಸಕರಾಗಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಗುರುವಾರ ಬೆಳಗ್ಗೆ ಪ್ರಶಾಂತ್ ವಿರುದ್ಧ ವ್ಯಕ್ತಿಯೊಬ್ಬರು ಲಂಚ ಪಡೆದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಅದರಂತೆ ಲೋಕಾಯುಕ್ತ (Lokayutha) ಅಧಿಕಾರಿಗಳು ಬಲೆ ಬೀಸಿ ಪ್ರಶಾಂತ್ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಲೋಕಾಯುಕ್ತದ ಅಧಿಕಾರಿಯೊಬ್ಬರು, ನಾವು ಅವರ ಕಚೇರಿಯಲ್ಲಿ ತಪಾಸಣೆ ನಡೆಸಿದ್ದೇವೆ ಮತ್ತು 1.7 ಕೋಟಿ ರೂ. ಪತ್ತೆಯಾಗಿದೆ.

ಪ್ರಶಾಂತ್ ತಂದೆಯ ಪರವಾಗಿ ಲಂಚ ಪಡೆಯುತ್ತಿದ್ದಾರೆ ಎಂದು ಶಂಕಿಸಲಾಗಿತ್ತು.

ನಾವು ಅವರ ಕಚೇರಿಯಲ್ಲಿ ಸಿಕ್ಕ ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಶಾಸಕ ಮಾಡಾಳ್ (raid on prashant madal) ವಿರೂಪಾಕ್ಷಪ್ಪ ಅವರನ್ನು ಸಂಪರ್ಕಿಸಿದಾಗ, ನನಗೆ ಈ ಬಗ್ಗೆ ಗೊತ್ತಿಲ್ಲ,

ಸುದ್ದಿ ವರದಿಗಳಿಂದ ಘಟನೆಯ ಬಗ್ಗೆ ನನಗೆ ಮಾಹಿತಿ ಸಿಕ್ಕಿತು. ನನ್ನ ಮಗ ಈಗ ಲೋಕಾಯುಕ್ತರ ವಶದಲ್ಲಿರುವುದರಿಂದ ನಾನು ಅವರೊಂದಿಗೆ ಮಾತನಾಡಲಿಲ್ಲ ಎಂದು ಹೇಳಿದರು.

ಈ ಹಿಂದೆ ಕರ್ನಾಟಕ ರಾಜ್ಯ ಹೈಕೋರ್ಟ್ ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು ವಿಸರ್ಜಿಸಿ ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿತು.

ಲೋಕಾಯುಕ್ತವು ಸರ್ಕಾರ ಅಥವಾ ಅದರ ಆಡಳಿತದ (ಸಾರ್ವಜನಿಕ ಸೇವಕರು) ಕೆಲಸದ ಸಮಗ್ರತೆ ಮತ್ತು ದಕ್ಷತೆಯ ವಿರುದ್ಧದ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯ ಮಟ್ಟದಲ್ಲಿ ರಚಿಸಲಾದ ಭ್ರಷ್ಟಾಚಾರ ವಿರೋಧಿ ಪ್ರಾಧಿಕಾರವಾಗಿದೆ.

Exit mobile version