ಜಮೀರ್ ಅಹಮ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸ್ ದಾಳಿ

ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರದ ಕಾವೇರಿದ್ದು, ಕರ್ನಾಟಕದ ಬಿಜೆಪಿ ಹಾಗೂ ಕಾಂಗ್ರೆಸ್ (Congress) ನಾಯಕರು ಭರ್ಜರಿ ಮತ ಬೇಟೆಯಾಡಿದ್ದಾರೆ. ಇನ್ನು ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ತಂಗಿದ್ದ ಹೋಟೆಲ್ ಮೇಲೆ ನಿನ್ನೆ(ನವೆಂಬರ್ 22) ತಡರಾತ್ರಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರ್ನಾಟಕದ ನಾಯಕರು ಸಹ ತೆರಳಿದ್ದು, ಬಿಜೆಪಿ (BJP) ಹಾಗೂ ಕಾಂಗ್ರೆಸ್ ನಾಯಕರು ಸಹ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಅದರಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಮತ ಬೇಟೆ ನಡೆಸಿದ್ದಾರೆ.

ಈ ಮಧ್ಯೆ ಜಮೀರ್ ನೆಲೆಸಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್(Park Hyatt Hotel) ಮೇಲೆ ದಾಳಿಯಾಗಿದೆ.

ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಅನುಮಾನದ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದು, ಇನ್ನು ಈ ಬಗ್ಗೆ ಜಮೀರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ಹೊರಹಾಕಿದ್ದಾರೆ.

ನಾನು ತಂಗಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆದರೆ ಏನು ಸಿಕ್ಕಿಲ್ಲ.

ಕಾಂಗ್ರೆಸ್ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿದೆ. ಹಾಗಾಗಿ ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ಕುತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಭವ್ಯಶ್ರೀ ಆರ್. ಜೆ

Exit mobile version