ರಾಜ್ಯಾದ್ಯಂತ ಅಬ್ಬರಿಸುತ್ತಿರುವ ವರುಣ, ತುಂಬಿ ಹರಿಯುತ್ತಿರುವ ಕೆರೆ ಕಟ್ಟೆಗಳು

ಬೆಂಗಳೂರು ನ 20 :  ರಾಜ್ಯಾದ್ಯಂತ ಸುರುಯುತ್ತಿರುವ ಕುಂಭ ದ್ರೋಣ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳು ಜಲಾವೃತವಾಗಿದೆ. ಜೊತೆಗೆ ಹಲವು ಕಡೆಗಳಲ್ಲಿ ಅಪಾರ ಪ್ರಮಾಣ ನಷ್ಟಕೂಡ ಸಂಭವಿಸಿದೆ. ಇಂದೂ ಕರ್ನಾಟಕದಲ್ಲಿ ಭಾರೀ ಮಳೆ ಬರುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆಗಳಿದ್ದು, ಗುಡುಗು,ಸಿಡಿಲು ಸಹಿತ ಧಾರಾಕಾರ ಮಳೆ ಬರಲಿದೆ. ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಭಾರಿ ಮಳೆ ಹಿನ್ನೆಲೆ ‘ಯೆಲ್ಲೊ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಈಗಾಗಲೇ ಮಳೆಯ ಅವಾಂತರಕ್ಕೆ ರಾಜ್ಯದ ಜನ ತತ್ತರಿಸಿದ್ದು, ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಡ್ಯ, ಹಾವೇರಿ, ಧಾರವಾಡ, ಕೊಪ್ಪಳ, ಮೈಸೂರು ಮತ್ತು ಬಳ್ಳಾರಿಯಲ್ಲೂ ಕೂಡ ರಜೆ ಘೋಷಿಸಲಾಗಿದೆ.

Exit mobile version