ರೈತರ ಹೋರಾಟ; ಕೊರೆವ ಚಳಿಯಲ್ಲಿ ಮುಂದುವರೆದ ಹೋರಾಟ

ನವದೆಹಲಿ, ಜ. 01: ರಾಜಧಾನಿ ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾಗಿದ್ದರಿಂದ ಕೊರೆಯುವ ಚಳಿಯಲ್ಲಿ ಹೊರಬರಲಾಗದೆ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್‌ಗಳ ಒಳಗೆಯೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಯಿತು.

ಕಳೆದ 15 ವರ್ಷಗಳಲ್ಲಿ ಹೊಸ ವರ್ಷದ ದಿನ ತಾಪಮಾನ 1 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದ್ದು, ಇದೇ ಮೊದಲಾಗಿದೆ. ಬೆಲೆ ಏರಿಕೆ ಮತ್ತು ಕೋಲು ಸುಡುವಿಕೆ ಮೇಲೆ ದಂಡ ಹೇರುವ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಕೇಂದ್ರ ಸರ್ಕಾರ ರೈತರಿಗೆ ಆಶ್ವಾಸನೆ ನೀಡಿದೆ. ಆದರೆ ಮೂರು ನೂತನ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವ ಮುಖ್ಯ ಬೇಡಿಕೆಗಳಿಗೆ ಇನ್ನೂ ಸರ್ಕಾರ ಮತ್ತು ರೈತರು ಸಹಮತಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ. ಕಳೆದ ಬುಧವಾರ ನಡೆಸಿದ ಮಾತುಕತೆ ಕೂಡ ವಿಫಲವಾಗಿದ್ದು, ಮುಂದಿನ ಮಾತುಕತೆ ಜನವರಿ 4ರಂದು ನಡೆಯಲಿದೆ ಎಂದು ವರದಿಗಳು ತಿಳಿಸಿವೆ.

ಕಳೆದ ಬುಧವಾರ ನಡೆದ 6ನೇ ಸುತ್ತಿನ ಮಾತುಕತೆಯಲ್ಲಿ ಶೇಕಡಾ 50ರಷ್ಟು ಸಹಮತಕ್ಕೆ ಬರಲಾಗಿದ್ದು ನಾಲ್ಕು ವಿಷಯಗಳಲ್ಲಿ ಎರಡು ವಿಚಾರಗಳ ಮೇಲೆ ಪರಸ್ಪರ ಒಪ್ಪಂದಕ್ಕೆ ಬರಲಾಗಿದ್ದು ಉಳಿದವುಗಳು ನಾಡಿದ್ದು 4ರಂದು ಮಾತುಕತೆ ವೇಳೆ ಚರ್ಚೆಗೆ ಬರಲಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ತಿಳಿಸಿದ್ದಾರೆ.ಕಳೆದ ಸಭೆಯಲ್ಲಿ 41 ರೈತ ಪ್ರತಿನಿಧಿಗಳ ಸದಸ್ಯರು ಭಾಗವಹಿಸಿದ್ದರು.

ದೆಹಲಿಯ ಗಡಿಭಾಗದಲ್ಲಿ ಭದ್ರತೆ ತೀವ್ರವಾಗಿದೆ, ನೂರಾರು ಮಂದಿ ಪೊಲೀಸರನ್ನು ಸಿಂಘು, ಗಝಿಪುರ್, ಟಿಕ್ರಿ ಗಡಿಭಾಗಗಳಲ್ಲಿ ನಿಯೋಜಿಸಲಾಗಿದೆ. ಕಳೆದೊಂದು ತಿಂಗಳಿಂದ ಇಲ್ಲಿ ಪೊಲೀಸರು ತೀವ್ರವಾಗಿ ಪ್ರತಿಭಟನಾ ನಿರತರಾಗಿದ್ದು, ಪ್ರತಿಭಟನೆಯಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ, ಪೊಲೀಸರು ವಾಹನ ಸಂಚಾರರಿಗೆ ಬದಲಿ ಮಾರ್ಗಗಳನ್ನು ಸೂಚಿಸುವ ಅನಿವಾರ್ಯತೆ ಎದುರಾಗಿದೆ.

ಕಳೆದ ಸೆಪ್ಟೆಂಬರ್ ನಲ್ಲಿ ತಂದ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ರೈತರ ಸುಧಾರಣೆಗೆ, ಕೃಷಿ ಕ್ಷೇತ್ರದ ಸುಧಾರಣೆಗೆ ಎಂದು ಸರ್ಕಾರ ಹೇಳುತ್ತಿದೆ. ರೈತರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬಹುದಾಗಿದೆ, ರೈತರು ಎಲ್ಲಿ ಬೇಕಾದರೂ ತಮ್ಮ ವಸ್ತುಗಳನ್ನು ಮಾರಾಟ ಮಾಡಬಹುದು ಎಂದು ಹೇಳಲಾಗುತ್ತಿದೆ.

ಆದರೆ ರೈತರು ನೂತನ ಕಾಯ್ದೆಯಿಂದ ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೋಗುವುದಲ್ಲದೆ, ಮಂಡಿ ವ್ಯವಸ್ಥೆ ಕೂಡ ಕಳೆದುಹೋಗುತ್ತದೆ, ಇದರಿಂದ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಎಂದು ಆರೋಪಿಸುತ್ತಿದ್ದಾರೆ. ಆದರೆ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಮತ್ತು ಮಂಡಿ ವ್ಯವಸ್ಥೆ ಹೋಗುವುದಿಲ್ಲ, ವಿರೋಧ ಪಕ್ಷದವರು ರೈತರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.