ಸ್ವಾಮೀಜಿ ಕುಲಪತಿಯಾದ ಹಿನ್ನೆಲೆ ಪ್ರಮಾಣಪತ್ರ ಪಡೆದುಕೊಳ್ಳಲು ವಿದ್ಯಾರ್ಥಿಗಳ ಹಿಂದೇಟು

ಕೊಲೊಂಬೊ ಡಿ 21 : ಸ್ವಾಮೀಜಿಯೊಬ್ಬರನ್ನು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿಕೊಂಡಿರುವುದಕ್ಕೆ ವಿರೋಧಿಸಿ ವಿದ್ಯಾರ್ಥಿಗಳು ಪ್ರಮಾಣ ಪತ್ರ ತೆಗೆದುಕೊಳ್ಳು ವಿರೋಧಿಸಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.  ಕೊಲಂಬೊ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ದೇಶದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಬಲಿಗ ಸ್ವಾಮಿಯೊಬ್ಬರನ್ನು ನೇಮಿಸಿದ್ದನ್ನು ವಿರೋಧಿಸಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದಿದೆ.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಗಲಿಗ ಧರ್ಮ ಗುರು, ಮುರುತ್ತೆತ್ತುವೆ ಆನಂದ ಥೇರೊ ಅವರನ್ನು ಅಲ್ಲಿನ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಕೊಲಂಬೊ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದ್ದರು. ಆದರೆ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಯು ಎಂದಿಗೂ ರಾಜಕೀಯ ನೇಮಕಾತಿಯಾಗಬಾರದು ಹಾಗೂ ರಾಜಕೀಯ ಕಾರ್ಯಸೂಚಿಯನ್ನು ಪೂರೈಸುವಂತಿರಬಾರದು ಎಂದು ಪ್ರತಿಪಾದಿಸಿ ಪ್ರತಿಭಟಿಸಿದ್ದರು.

ಇಷ್ಟೇ ಅಲ್ಲದೆ, ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆಫ್ ಮ್ಯಾನೇಜ್ಮೆಂಟ್ ಮತ್ತು ಫೈನಾನ್ಸ್ ಟೀಚರ್ಸ್ ಅಸೋಸಿಯೇಷನ್ ​​(ಎಫ್‌ಎಂಎಫ್‌ಟಿಎ) ಕೂಡಾ ಪದವಿ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡಿತ್ತು.

 ಆದರೆ ದೇಶದ ಆಡಳಿತ ವರ್ಗ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಮನ್ನಿಸಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಗುಂಪೊಂದು ವಿಶ್ವವಿದ್ಯಾಲಯದ ಪದವಿ ಸಮಾರಂಭದಲ್ಲಿ ಪ್ರಮಾಣಪತ್ರವನ್ನು ಸ್ವೀಕರಿಸುವ ಸಮಯದಲ್ಲಿ ಸ್ವಾಮಿಯ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಪ್ರತಿಭಟಿಸಿದ್ದಾರೆ.

ಹಲವಾರು ವಿದ್ಯಾರ್ಥಿಗಳು ವೇದಿಕೆ ಮೇಲೆ ಬಂದು ಧರ್ಮ ಗುರುವಿನ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಅವರನ್ನು ಮುಜುಗರಕ್ಕೆ ಒಡ್ಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದೆ. ಪ್ರತಿಭಟನೆಯನ್ನು ಹೀಗೆ ಕೂಡಾ ಮಾಡಬಹುದು ಎಂದು ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಅಭಿನಂಧನೆಗಳ ಸುರಿಮಳೆ ಸುರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವೇದಿಕೆಗೆ ಆಗಮಿಸಿ ಕುಲಪತಿಯ ಕೈಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ

Exit mobile version