• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕ್! ; ಪ್ರತಿ ಡಿಜಿಟಲ್ ಪಾವತಿ ಮೇಲೆ ಶುಲ್ಕ ವಿಧಿಸಲು RBI ಚಿಂತನೆ

Mohan Shetty by Mohan Shetty
in ಡಿಜಿಟಲ್ ಜ್ಞಾನ, ದೇಶ-ವಿದೇಶ
upi
0
SHARES
0
VIEWS
Share on FacebookShare on Twitter

ಈ ಕುರಿತು ತಮ್ಮ ಫೇಸ್‍ಬುಕ್ ಪುಟದಲ್ಲಿ ವಿವರವಾಗಿ ತಿಳಿಸಿರುವ ಮಾಜೀ ಹಿರಿಯ ಪತ್ರಕರ್ತ ರಾಜರಾಂ ತಲ್ಲೂರು ಅವರು, ಈ ರೀತಿ ಬರೆದುಕೊಂಡಿದ್ದಾರೆ, ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ!

“ಭಾರತೀಯ ರಿಸರ್ವ್ ಬ್ಯಾಂಕ್(Reserve Bank Of India) ಈಗ UPI ಸಹಿತ ಎಲ್ಲ ಡಿಜಿಟಲ್ ಪಾವತಿಗಳಿಗೆ(Digital Payments) “ವೆಚ್ಚ ವಿಧಿಸುವ” ಮಾತಾಡುತ್ತಿದೆ.

Digital payments

ಪಕ್ಕಾ ದಂಧೆಗೆ ಕುಳಿತವರು ಆಡಳಿತಕ್ಕೆ ಬಂದರೆ ಏನಾಗಬೇಕೋ ಅದು ಆಗತೊಡಗಿದೆ. ಜನ ಮಾತನಾಡದಿದ್ದರೆ, ನಾಳೆ ಶುದ್ಧ ಗಾಳಿ ಕೊಟ್ಟದ್ದಕ್ಕಾಗಿ ಪ್ರತೀ ಉಸಿರಿಗೆ ತೆರಿಗೆ ಹಾಕಲಿದ್ದಾರೆ ಇವರು.

ದೇಶದಲ್ಲಿ ಬ್ಯಾಂಕುಗಳ ಖಾಸಗೀಕರಣ ಆರಂಭ ಆದಲ್ಲಿಂದ ಇಲ್ಲಿಯ ತನಕ ಯಾವ ಯಾವ ಲಾಜಿಕ್ ಬಳಸಿ ಜನರನ್ನು“ಮಂಗ” ಮಾಡಲಾಯಿತು ಎಂಬುದನ್ನು ಗಮನಿಸುತ್ತಾ ಬನ್ನಿ.

https://fb.watch/f0browC6-q/


[ಗಮನಿಸಿ : ಬ್ಯಾಂಕು ಖಾಸಗೀಕರಣ ಪ್ರಕ್ರಿಯೆ ಆರಂಭಗೊಂಡದ್ದು ಮನಮೋಹನ್ ಸಿಂಗ್ ಕಾಲದಲ್ಲಿ. ಹಾಗಾಗಿ ಇದು “ಕೇವಲ ಈಗಿನವರಿಗೆ ಬೈಯುವ ಪೋಸ್ಟ್” ಅಲ್ಲ!] ಮೊದಲಿಗೆ ಬ್ಯಾಂಕುಗಳಲ್ಲಿ ಸಿಬ್ಬಂದಿ ಜಾಸ್ತಿ, ಕೆಲಸ ಕಡಿಮೆ ಆಗ್ತಿದೆ, ಲಾಭ ಇಲ್ಲ, ಸ್ಟ್ರೈಕ್ ಮಾಡ್ತಾರೆ ಅಂತ ಹೇಳಿ ಕೆಲಸದ ಎಫೀಷಿಯನ್ಸಿ ಹೆಸರಲ್ಲಿ ಕಂಪ್ಯೂಟರೀಕರಣ ಬಂತು. ಸಿಬ್ಬಂದಿ ಕಡಿಮೆ ಆಯಿತು.
VVVV

RBI
  • ಆ ಬಳಿಕ ಖಾಸಗಿ ಬ್ಯಾಂಕುಗಳಿಗೆ ಅವಕಾಶ ಮಾಡಿಕೊಡಲಾಯಿತು. ಅಲ್ಲಿ “ಲಾಭ ಗಳಿಕೆಯ” ಹೆಸರಲ್ಲಿ, ಜನಸಾಮಾನ್ಯರನ್ನು ಬ್ಯಾಂಕುಗಳಿಂದ ದೂರ ಅಟ್ಟಲಾಯಿತು.
  • ಬ್ಯಾಂಕುಗಳನ್ನು ದೊಡ್ಡದಾಗಿಸಲು, ಎಫೀಷಿಯಂಟ್ ಮಾಡಲು ಒಂದರೊಳಗಿನ್ನೊಂದು ವಿಲೀನಗೊಳಿಸಲಾಯಿತು.
  • ಬ್ಯಾಂಕುಗಳಲ್ಲಿ ಕ್ಷಿಪ್ರ ವ್ಯವಹಾರ, ಸಿಬ್ಬಂದಿ ಕಡಿಮೆ ಮಾಡಿ ಇನ್ನಷ್ಟು ಲಾಭ ಎಂದು ಹೇಳಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಆಯಿತು.
Next
  • ಜನ ಬ್ಯಾಂಕಿಗೆ ಬಂದರೆ ಖರ್ಚು ಜಾಸ್ತಿ ಎಂದು ಹೇಳಿ ATM, ಡಿಜಿಟಲ್ ಪಾವತಿ (RTGS, IMPS ಇತ್ಯಾದಿ) ಬಂದವು. ಮನೆ ಬಾಗಿಲಿಗೇ ಬ್ಯಾಂಕ್ ಬಂದಿದೆ ಎಂದು ಬೂಸಿ ಬಿಡಲಾಯಿತು.
  • ಡಿಜಿಟಲ್ ಇಂಡಿಯಾದಲ್ಲಿ UPI ಆಯಿತು. ಜನ ನಗದು ಚಲಾವಣೆ ಮಾಡಲಿಕ್ಕಿಲ್ಲ, ನೋಟು ಪ್ರಿಂಟ್ ಮಾಡಿದರೆ ಖರ್ಚು ಜಾಸ್ತಿ, ಕಾಳಧನ ಹೆಚ್ಚಾಗ್ತದೆ ಎಂದೆಲ್ಲ ಹೇಳಿ ಮೊಬೈಲ್ ಬ್ಯಾಂಕಿಂಗ್ ಚಾಲ್ತಿಗೆ ಬಂತು.
Payment

ಈಗ ಎಲ್ಲ ಮುಗಿದ ಮೇಲೆ #UPI ಪಾವತಿಗೂ “ವೆಚ್ಚ” ವಿಧಿಸುವ ಮಾತು ಆಡಲಾಗುತ್ತಿದೆ. ಅಂದರೆ ಶೀಘ್ರವೇ ನೀವು ಪಾವತಿಸುವ ಗೂಗಲ್ ಪೇ, ಫೋನ್ ಪೇ, ಪೇಟಿಯೆಂ ಇತ್ಯಾದಿಗಳಿಗೂ ಪ್ರತೀ ಪಾವತಿಗೆ “ವೆಚ್ಚ” ತೆರಬೇಕಾಗಲಿದೆ. ಮೊದಲಿಗೆ ದೊಡ್ಡ ಮೊತ್ತಕ್ಕೆ ಮಾತ್ರ ವೆಚ್ಚ ಎಂದು ಹೇಳಿ, ಮುಂದೆ ಮೂರು ಬಜೆಟ್ ಮುಗಿಯುವಾಗ ಅಂಗಡಿಯಲ್ಲಿ ನೀವು ಪಾವತಿ ಮಾಡುವ ಹದಿನೈದು ಇಪ್ಪತ್ತು ರೂಪಾಯಿಗೂ ವೆಚ್ಚ ಬರಬಹುದು!

https://youtu.be/toJWFWXVevs

ಸ್ವಾಮೀ, ದೇಶ ನಡೆಸುವ ತಜ್ಞರೇ ಒಂದು ಮಾತು ಹೇಳಿ ಮುಂದುವರಿಯಿರಿ : ಸಾಂಪ್ರದಾಯಿಕ ಬ್ಯಾಂಕಿಂಗಿನಿಂದ ಬರುವ ಆದಾಯ ಬರುತ್ತಿದ್ದರೂ (ಅಂದರೆ ಸಾಲದ ಬಡ್ಡಿ, ಠೇವಣಿಯ ಮರು ಹೂಡಿಕೆ, ಬ್ಯಾಂಕಿಂಗ್ ಸೇವೆಗಳಿಗೆ ವಿಧಿಸುವ ವೆಚ್ಚ) ಇಲ್ಲಿಯ ತನಕ ಇಷ್ಟೆಲ್ಲ ವೆಚ್ಚ ಕಡಿತ ಪ್ರಯತ್ನ ಮಾಡಿ ಕೂಡ ನಿಮ್ಮ ಹೊಟ್ಟೆ ತುಂಬಿಲ್ಲ ಯಾಕೆ? ಈಗ ಜನ ತಮ್ಮ ಕಿಸೆಯಲ್ಲಿಟ್ಟುಯ್ಕೊಂಡು ತಿರುಗುವ ದುಡ್ಡನ್ನೂ ಡಿಜಿಟಲ್ ಮಾಡಿ, ಅದರಲ್ಲೂ ಪಾಲಿಗೆ ಬರುತ್ತಿದ್ದೀರಲ್ಲಾ ಉದ್ದೇಶ ಏನು?

Shakthikantha das


ಜನ ಈ ಪ್ರಶ್ನೆಗಳನ್ನು ಕೇಳದಿದ್ದರೆ ಮುಂದಿನ ದಿನಗಳು ಬಹಳ ಕಷ್ಟ ಇವೆ! ಈಗ ರಿಸರ್ವ್ ಬ್ಯಾಂಕಿಗೆ ಜನ ಅಕ್ಟೋಬರ್ ಮೂರರ ಒಳಗೆ ತಮ್ಮ ಅಭಿಪ್ರಾಯ ಹೇಳಬೇಕಂತೆ. ಬಾಯಿಬಿಟ್ಟು ಮಾತನಾಡಿ.

ಅದಕ್ಕಾಗಿ ಅಭಿಯಾನವನ್ನೇ ನಡೆಸಿ. ಇಲ್ಲದಿದ್ದರೆ, ಬಾಯಿ ಮುಚ್ಚಿಕೊಂಡು ಕಿಸೆಗೆ ಕತ್ತರಿ ಹಾಕಿಸಿಕೊಂಡು ತೆಪ್ಪಗಿರಿ. ಆಯ್ಕೆ ನಿಮ್ಮದು.

ರಿಸರ್ವ್ ಬ್ಯಾಂಕ್ ನೀಡಿರುವ ವಿವರಣೆಗಳು ಇಲ್ಲಿವೆ:
https://www.rbi.org.in/Scripts/PublicationsView.aspx?id=21082

Tags: Digital paymentsIndiarbireserve bank of india

Related News

ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.
ದೇಶ-ವಿದೇಶ

ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.

October 2, 2023
ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.