ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಹೆ ಕೊರೊನಾ ಸೋಂಕು

ರಾಜಸ್ಥಾನ, ಏ. 29: ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ಯಾವುದೇ ಸೋಂಕು ಲಕ್ಷಣಗಳಿಲ್ಲ. ಮನೆಯಲ್ಲೇ ಸ್ವಯಂ ಕ್ವಾರಂಟೈನ್‌ ಆಗಿದ್ದೇನೆ. ಅಲ್ಲದೇ ಕೊರೊನಾ ನಿಯಮಗಳಿಗೆ ಅನುಗುಣವಾಗಿ ಕೆಲಸ ಮುಂದುವರಿಸುವುದಾಗಿಯೂ ತಿಳಿಸಿದ್ದಾರೆ.

ಬುಧವಾರವಷ್ಟೇ ಅಶೋಕ್ ಗೆಹ್ಲೋಟ್ ಅವರ ಪತ್ನಿ ಸುನಿತಾ ಗೆಹ್ಲೋಟ್‌ಗೆ ಕೋವಿಡ್–19 ಸೋಂಕು ತಗುಲಿತ್ತು.

Exit mobile version