Visit Channel

ರಾಜಸ್ತಾನ: ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದು 11 ಮಂದಿ ಸಾವು

vijaya-karnataka

ರಾಜಸ್ತಾನ, ಜು. 12: ಜೈಪುರ್ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ಅಮೆರ್‌ ಪ್ಯಾಲೆಸ್ ನ ವಾಚ್ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

ಸಿಡಿಲು ಬಡಿದಾಗ ವಾಚ್‌ ಟವರ್‌ ಮೇಲೆ 27 ಜನರು ಇದ್ದರು. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.